ಮಹಿಳಾ ಮೀಸಲಾತಿ ಮಸೂದೆಗೆ ಬಿಜೆಪಿ ವಿರೋಧ: ಸುರೇಶ್ ಟೀಕೆ

ಬೆಂಗಳೂರು: ‘ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ಕಲ್ಪಿಸುವ ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ಲಭಿಸಿತ್ತು. ಆದರೆ, ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಬಿಜೆಪಿ ಸದಸ್ಯರೇ ವಿರೋಧಿಸಿದ್ದರು’ ಎಂದು ಸಂಸದ ಡಿ.ಕೆ.ಸುರೇಶ್ ದೂರಿದರು.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಘಟಕ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್, ‘ಜನಪರ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪೊಲೀಸರ ಮೂಲಕ ಬೆದರಿಸುವ ಕೆಲಸವನ್ನು ಶಾಸಕ ಎಂ.ಕೃಷ್ಣಪ್ಪ ಮಾಡುತ್ತಿದ್ದಾರೆ. ಆಪ್ತರು ಹಾಗೂ ಬೆಂಬಲಿಗರ ಒಡೆತನದ ಲೇಔಟ್‌ಗಳಲ್ಲಷ್ಟೇ ಡಾಂಬರೀಕರಣ ಮಾಡುವಂತೆ ಸೂಚಿಸಿದ್ದಾರೆ. ಬಡವರು ವಾಸಿಸುವ ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕಿಡಿಕಾರಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕಾಂಗ್ರೆಸ್ ಮುಖಂಡರಾದ ಕುಸುಮಾ ಹನುಮಂತರಾಯಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.