ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಅಲ್ಪಸಂಖ್ಯಾತರಿಗೆ ಇನ್ಮುಂದೆ ಕರ್ನಾಟಕ ಪೊಲೀಸ್‌ ನೇಮಕಾತಿಯಲ್ಲಿ ಮೀಸಲಾತಿ

Last Updated 22 ಡಿಸೆಂಬರ್ 2021, 5:14 IST
ಅಕ್ಷರ ಗಾತ್ರ

ಬೆಂಗಳೂರು: ‘ಲೈಂಗಿಕ ಅಲ್ಪಸಂಖ್ಯಾತರಿಗೆ ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಶೇ 1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಂಗಳವಾರ ಮಾತನಾಡಿದ ಅವರು ‘ಪೊಲೀಸ್‌ ಇಲಾಖೆಯಲ್ಲಿ ಮೀಸಲಾತಿ ಕಲ್ಪಿಸುವಂತೆ ಲೈಂಗಿಕ ಅಲ್ಪಸಂಖ್ಯಾತರು ಮನವಿ ಮಾಡಿದ್ದರು. ಅವರ ಮನವಿ ಪುರಸ್ಕರಿಸಲಾಗಿದೆ. ಇದು ದೇಶದಲ್ಲೇ ಮೊದಲ ಹೆಜ್ಜೆ. ಆ ಸಮುದಾಯದಲ್ಲೂ ಅರ್ಹ ಅಭ್ಯರ್ಥಿಗಳಿದ್ದರೆ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ’ ಎಂದರು.

‘ಲೈಂಗಿಕ ಅಲ್ಪಸಂಖ್ಯಾತರು ತಪ್ಪು ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತಲೇ ಇರುತ್ತೇವೆ. ಆ ಸಮುದಾಯದವರ‌ಲ್ಲಿ ಉತ್ತಮ ಅಭ್ಯರ್ಥಿಗಳಿದ್ದರೆ ಏಕೆ ಕೆಲಸ ಕೊಡಬಾರದು ಎಂಬ ಆಲೋಚನೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದ್ದು, ಇದರಲ್ಲಿ ಮಹಿಳೆಯರು ಹಾಗೂ ಪುರುಷರ ಜೊತೆಗೆ ಲೈಂಗಿಕ ಅಲ್ಪಸಂಖ್ಯಾತರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT