ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

12ರಿಂದ ಸ್ಥಾನಿಕ ವೈದ್ಯರ ಪ್ರತಿಭಟನೆ

Published : 8 ಆಗಸ್ಟ್ 2024, 16:02 IST
Last Updated : 8 ಆಗಸ್ಟ್ 2024, 16:02 IST
ಫಾಲೋ ಮಾಡಿ
Comments

ಬೆಂಗಳೂರು: ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು (ಕೆಎಆರ್‌ಡಿ) ಇದೇ 12ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

‘ಈಗಾಗಲೇ ಸ್ಥಾನಿಕ ವೈದ್ಯರು ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿ ವೇತನ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರು ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಒಂದು ವರ್ಷದಿಂದ ಪತ್ರದ ಮೂಲಕ ಮನವಿ ಮಾಡಲಾಗಿದೆ. ಆದರೂ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಹೀಗಾಗಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು’ ಎಂದು ಸಂಘದ ಅಧ್ಯಕ್ಷ ಡಾ. ಸಿರೀಶ್ ಶಿವರಾಮಯ್ಯ ತಿಳಿಸಿದ್ದಾರೆ.

‘ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಶುಲ್ಕ ಅಧಿಕವಿದೆ. ಆದರೆ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ದೇಶದಲ್ಲಿಯೇ ಅತಿ ಕಡಿಮೆಯಿದೆ. ಹೆಚ್ಚು ಪ್ರವೇಶ ಶುಲ್ಕ ಪಡೆದು, ಕಡಿಮೆ ವಿದ್ಯಾರ್ಥಿ ವೇತನ ನೀಡುವ ಮೂಲಕ ವಂಚಿಸಲಾಗುತ್ತಿದೆ’ ಎಂದು ದೂರಿದ್ದಾರೆ.

‘ಪ್ರತಿಭಟನೆ ವೇಳೆ ತುರ್ತು ಚಿಕಿತ್ಸೆ ಹೊರತು ಪಡಿಸಿ, ಹೊರ ರೋಗಿಗಳ ವಿಭಾಗ ಹಾಗೂ ತುರ್ತು ಅಲ್ಲದ ಸೇವೆಗಳನ್ನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ನೀಡುವುದಿಲ್ಲ. ಇದರಿಂದ ರೋಗಿಗಳಿಗೆ ತೊಂದರೆ ಆದರೆ ವಿಷಾದಿಸುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಪರಿಗಣಿಸಿ, ಈಡೇರಿಸುವವರೆಗೂ ನಮ್ಮ ಹೋರಾಟ ನಿಲ್ಲದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT