ಬೆಂಗಳೂರು: ರಾಜ್ಯದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಉಚಿತ ದೃಷ್ಟಿ ತಪಾಸಣೆ ಮತ್ತು ಓದುವಾಗ ಬಳಸುವ ಕನ್ನಡಕಗಳ ವಿತರಣೆಗೆ ಆರೋಗ್ಯ ಇಲಾಖೆಯು ರಿಸ್ಟೋರಿಂಗ್ ವಿಷನ್ ಸಂಸ್ಥೆ ಜತೆಗೆ ಒಡಂಬಡಿಕೆ ಮಾಡಿಕೊಂಡಿದೆ.

ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರಗಳ ಮೂಲಕ ಈ ತಪಾಸಣೆ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ಯಾದಗಿರಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಕೇಂದ್ರಗಳನ್ನು ಒಳಗೊಂಡಂತೆ ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಓದಲು ಬಳಸುವ ಕನ್ನಡಕಗಳನ್ನು ಉಚಿತವಾಗಿ ವಿತರಿಸುವ ಗುರಿಯನ್ನು ಇಲಾಖೆ ಹೊಂದಿದೆ.

ಯಾದಗಿರಿ ಜಿಲ್ಲೆಯಲ್ಲಿ ಶೇ 28 ರಷ್ಟು ಜನರು ದೂರದೃಷ್ಟಿ ಹಾಗೂ ಸಮೀಪ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಇಲಾಖೆ ಅಂದಾಜಿಸಿದೆ.

‘ರಾಜ್ಯದಲ್ಲಿ 2025ರ ಅಕ್ಟೋಬರ್ನಲ್ಲಿ ಆರಂಭಿಸಿದ ‘ಆಶಾ ಕಿರಣ’ ಯೋಜನೆಯ ಕ್ಷೇತ್ರ ಮೌಲ್ಯಮಾಪನದ ನಂತರ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ತಂಡದ ಶಿಫಾರಸುಗಳನ್ನು ಆಧರಿಸಿ ಈ ಕಾರ್ಯಕ್ರಮ ವಿನ್ಯಾಸ ಮಾಡಲಾಗಿದೆ. ದೃಷ್ಟಿ ಸಮಸ್ಯೆ ಹೊಂದಿರುವ ವ್ಯಕ್ತಿಗಳನ್ನು ಸಮುದಾಯ ಮಟ್ಟದಲ್ಲಿ ಪರೀಕ್ಷಿಸಿ, ಅಗತ್ಯ ಇರುವವರಿಗೆ ಓದುವ ಕನ್ನಡಕಗಳನ್ನು ನೀಡಲಾಗುತ್ತದೆ’ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಆಶಾ ಸಿಬ್ಬಂದಿ ಸೇರಿ ಆರೋಗ್ಯ ಕಾರ್ಯಕರ್ತರು ಸಹ ಈ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮನೆ ಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ. ಮುಂದಿನ ಹಂತಗಳಲ್ಲಿ ರಾಜ್ಯದಾದ್ಯಂತ ಈ ಕಾರ್ಯಕ್ರಮ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.