ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ನಿವೃತ್ತ ಇಪಿಎಸ್‌ ನೌಕರರ ಪ್ರತಿಭಟನೆ

Published 27 ಜೂನ್ 2024, 16:28 IST
Last Updated 27 ಜೂನ್ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸಂಘರ್ಷ ಸಮಿತಿ, ಕೆ‌ಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನಿವೃತ್ತ ಇಪಿಎಸ್‌-95 ಸದಸ್ಯರ ಸಂಘಗಳ ವತಿಯಿಂದ ಕೇಂದ್ರ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಕನಿಷ್ಠ ₹7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ, ‘ಇಪಿಎಸ್‌ ನಿವೃತ್ತರ ಪರವಾಗಿ 2022ರ ನವೆಂಬರ್ 4ರಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಇಪಿಎಫ್‌ಒ ಅಧಿಕಾರಿಗಳು ಇದುವರೆಗೂ ಅನುಷ್ಠಾನಗೊಳಿಸಿಲ್ಲ’ ಎಂದು ದೂರಿದರು.

ರಾಷ್ಟ್ರೀಯ ಸಂಯೋಜಕ ರಮಕಾಂತ್ ನರಗುಂದ, ಅಧ್ಯಕ್ಷ ಶಂಕರ್ ಕುಮಾರ್, ವೀರ ಕುಮಾರ್ ಗಡದ್, ಡೋಲಪ್ಪ, ಸುಬ್ಬಣ್ಣ ಮಾತನಾಡಿದರು. 

ಕೇಂದ್ರ ಕಾರ್ಮಿಕ ಸಚಿವ ಮನ್ಸೂಖ್‌ ಮಾಂಡಲೀಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿಯ ಪ್ರತಿಯನ್ನು ರವಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT