ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ರಂದು ನಿವೃತ್ತ ನೌಕರರ ವಿಧಾನಸೌಧ ಚಲೋ

Last Updated 15 ಫೆಬ್ರುವರಿ 2020, 21:23 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನಿವೃತ್ತ ನೌಕರರಿಗೂ ನಗದುರಹಿತ ಯೋಜನೆಗಳ ಜಾರಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಇದೇ 19ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷಎಲ್.ಭೈರಪ್ಪ, ‘ನಿವೃತ್ತ ನೌಕರರಿಗೂಜ್ಯೋತಿ ಸಂಜೀವಿನಿ ಹಾಗೂ ಆಯುಷ್ಮಾನ್ ಭಾರತ್ ಯೋಜನೆಗಳನ್ನು ಜಾರಿ ಮಾಡಬೇಕು. ಪ್ರಯಾಣದರದಲ್ಲಿ ರಿಯಾಯಿತಿ, ಶವಸಂಸ್ಕಾರ ಭತ್ಯೆ, ನಿವೃತ್ತ ನೌಕರರ ಸಂಘಕ್ಕೆ ನಿವೇಶನ ಮಂಜೂರು, ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು’ ಎಂದು ಒತ್ತಾಯಿಸಿದರು.

‘ಈ ಬಗ್ಗೆ ಮನವಿ ಸಲ್ಲಿಸಿದ್ದರೂಸರ್ಕಾರ ಸ್ಪಂದಿಸಿಲ್ಲ. ಸಂಘದ ಸದಸ್ಯರೆಲ್ಲಾ ಒಗ್ಗೂಡಿ ರ‍್ಯಾಲಿಗೆ ನಡೆಸಲಿದ್ದೇವೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದ ಮಾರ್ಗವಾಗಿ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT