ಶನಿವಾರ, ಜನವರಿ 23, 2021
21 °C

ಕೆಐಎ: ನಿವೃತ್ತ ಆರ್‌ಟಿಒ ಬಳಿ ಜೀವಂತ ಗುಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುತ್ತಿದ್ದ ನಿವೃತ್ತ ಆರ್‌ಟಿಒ ನಂದೀಶ್ ಎಂಬುವರ ಬಳಿ ಜೀವಂತ ಗುಂಡುಗಳು ಪತ್ತೆಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಚೆನ್ನೈಗೆ ಹೋಗಲೆಂದು ನಂದೀಶ್ ಅವರು ನಿಲ್ದಾಣಕ್ಕೆ ಬಂದಿದ್ದರು. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ, ಅವರ ಬ್ಯಾಗ್‌ನಲ್ಲಿ ಪಿಸ್ತೂಲ್ ಹಾಗೂ 6 ಜೀವಂತ ಗುಂಡುಗಳು ಸಿಕ್ಕಿದ್ದವು’ ಎಂದು ಪೊಲೀಸ್ ಮೂಲಗಳು ಹೇಳಿವೆ.

’ನಂದೀಶ್ ಅವರನ್ನು ವಶಕ್ಕೆ ಪಡೆದ ಸಿಬ್ಬಂದಿ, ಠಾಣೆಗೆ ತಂದು ಒಪ್ಪಿಸಿದ್ದರು. ವಿಚಾರಣೆ ನಡೆಸಿದಾಗ, ಪಿಸ್ತೂಲ್ ಪರವಾನಗಿ ಇರುವುದಾಗಿ ನಂದೀಶ್ ಹೇಳಿದ್ದರು. ದಾಖಲೆಗಳ ಪರಿಶೀಲನೆ ನಡೆಸಿದಾಗ ಪರವಾನಗಿ ಇರುವುದು ಖಚಿತವಾಯಿತು. ಅವರಿಂದ ಹೇಳಿಕೆ ಪಡೆದು ವಾಪಸು ಕಳುಹಿಸಲಾಗಿದೆ. ಘಟನೆ ಸಂಬಂಧ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು