ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ: ಸಿಸಿಬಿ ಕಸ್ಟಡಿಗೆ ನಟಿ ಹೇಮಾ

Published 5 ಜೂನ್ 2024, 15:15 IST
Last Updated 5 ಜೂನ್ 2024, 15:15 IST
ಅಕ್ಷರ ಗಾತ್ರ

ಬೆಂಗಳೂರು: ಆನೇಕಲ್‌ ತಾಲ್ಲೂಕಿನ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವನೆ ಹಾಗೂ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ವಿಡಿಯೊ ಮಾಡಿ ಹರಿಬಿಟ್ಟ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲುಗು ನಟಿ ಹೇಮಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ರೇವ್‌ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ನಟಿ ಹೇಮಾ ಪಾರ್ಟಿಯಲ್ಲಿ ಪಾಲ್ಗೊಂಡಿದ್ದು ತನಿಖೆಯಿಂದ ಗೊತ್ತಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಹೇಮಾ ವಿಚಾರಣೆ ಗೈರಾಗಿದ್ದರು. ಅದಾದ ಮೇಲೆ ಜೂನ್‌ 3ರಂದು ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ನಟಿ ಹೇಮಾ ಗೊಂದಲದ ಹೇಳಿಕೆ ಹಾಗೂ ದಾಳಿ ಸಂದರ್ಭದಲ್ಲಿ ಸುಳ್ಳು ಹೆಸರು ಹಾಗೂ ಮೊಬೈಲ್ ನೀಡಿದ ಆರೋಪದಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

ಬುಧವಾರ ಆನೇಕಲ್‌ನ ಕೋರ್ಟ್‌ಗೆ ಹಾಜರು ಪಡಿಸಿ ಆರೋಪಿಯನ್ನು ಮೂರು ದಿನ ಸಿಸಿಬಿ ವಶಕ್ಕೆ ನೀಡುವಂತೆ ತನಿಖಾಧಿಕಾರಿಗಳು ಮನವಿ ಮಾಡಿದ್ದರು. ನ್ಯಾಯಾಲಯವು 24 ಗಂಟೆ ವಿಚಾರಣೆಗೆ ಅವಕಾಶ ನೀಡಿದೆ. ಗುರುವಾರ ಸಂಜೆ 5 ಗಂಟೆಗೆ ಮತ್ತೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಿಸಿಬಿ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT