ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇವಾ ವಿಶ್ವವಿದ್ಯಾಲಯದಲ್ಲಿ ‘ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌’ಗೆ ಚಾಲನೆ

Last Updated 8 ಜುಲೈ 2019, 20:25 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರ್‌ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಸಲುವಾಗಿ ನಗರದ ರೇವಾ ವಿಶ್ವವಿದ್ಯಾಲಯದಲ್ಲಿಹಾರ್ಡ್‌ವೇರ್‌ ಆವೃತ್ತಿಯ ‘ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌’ಗೆ ಸೋಮವಾರ ಚಾಲನೆ ನೀಡಲಾಯಿತು.

ಐದು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮವನ್ನುಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ (ಎಂಎಚ್‌ಆರ್‌ಡಿ) ಸಹಾಯಕ ನಿರ್ದೇಶಕ ಎಳಂಗೋವನ್ ಕರಿಯಪ್ಪನ್ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಳಂಗೋವನ್‌, ‘ವಿದ್ಯಾರ್ಥಿಗಳಿಗೆಈ ವರ್ಷ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಹೇರಳ ಅವಕಾಶಗಳು ದೊರೆಯಲಿವೆ. ಆದ್ದರಿಂದ ಲಭ್ಯ ಇರುವ ಅವಕಾಶಗಳನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬಳಸಿಕೊಳ್ಳಬೇಕು’ ಎಂದರು.

‘ಸಂಕೀರ್ಣ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಆವಿಷ್ಕಾರಗಳಿಗೆ ಮತ್ತು ಸಂಶೋಧನೆಗಳಿಗೆ ಸಂಸ್ಥೆ ನೆರವಾಗಲಿದೆ’ ಎಂದುರೇವಾ ವಿಶ್ವವಿದ್ಯಾಲಯದ ಕುಲಪತಿ ಪಿ.ಶ್ಯಾಮ ರಾಜು ತಿಳಿಸಿದರು.

ಉಪಕುಲಪತಿ ಎಸ್‌.ವೈ.ಕುಲಕರ್ಣಿ, ಕುಲಸಚಿವ ಎಂ.ಧನಂಜಯ್‌ ಮಾತನಾಡಿದರು. ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಈ ಹ್ಯಾಕಥಾನ್‌ನಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT