ರೇವಾ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ

ಯಲಹಂಕ: ರೇವಾ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವದಲ್ಲಿ 3,031 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ವಿವಿಧ ವಿಭಾಗಗಳಲ್ಲಿ 33 ಚಿನ್ನದ ಪದಕ, 23 ಪಿಎಚ್‌ಡಿ ಪದವಿಯನ್ನು ವಿದ್ಯಾರ್ಥಿಗಳು ಪಡೆದುಕೊಂಡರು. ಈ ವೇಳೆ ಮಾತನಾಡಿದ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ(ಯುಜಿಸಿ) ಅಧ್ಯಕ್ಷ ಪ್ರೊ.ಡಿ.ಪಿ.ಸಿಂಗ್, ‘ಭಾರತವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಪ್ರಗತಿಹೊಂದುತ್ತಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಮೈಲುಗಲ್ಲು ಸಾಧಿಸುತ್ತಿದ್ದು, ಚಂದ್ರಯಾನ-2 ಯಶಸ್ವಿ ಉಡಾವ
ಣೆಯೇ ಇದಕ್ಕೆ ಸಾಕ್ಷಿ’ ಎಂದರು.
ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ‘ವಿಶ್ವವಿದ್ಯಾಲಯದಲ್ಲಿ ಪಠ್ಯದ ಜತೆಗೆ ಪಠ್ಯೇತರ ವಿಷಯಗಳಿಗೂ ಆದ್ಯತೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.