ಬೆಂಗಳೂರು: ಬಡತನ ನಿರ್ಮೂಲನೆಯಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಹಾಗೂ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪಲು ರೇವಾ ವಿಶ್ವವಿದ್ಯಾಲಯ ಸಹಕಾರ ನೀಡಲಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಪಿ. ಶ್ಯಾಮರಾಜು ತಿಳಿಸಿದರು.

ರೇವಾ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಹಮ್ಮಿಕೊಂಡಿದ್ದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬಡತನ ನಿರ್ಮೂಲನೆ ವಿಚಾರದಲ್ಲಿ ವಿಶ್ವಸಂಸ್ಥೆ ವಿಶೇಷ ಗಮನ ನೀಡಿ ಎಲ್ಲಾ ದೇಶಗಳ ಸಹಕಾರವನ್ನು ಪಡೆಯುತ್ತಿದೆ. ಇದಕ್ಕಾಗಿ ಜಾಗತಿಕ ನೆಲೆಯಲ್ಲಿ ತಜ್ಞರು, ನಾನಾ ಕ್ಷೇತ್ರದ ಪ್ರಮುಖರು ಸಲಹೆಗಳನ್ನು ನೀಡುತ್ತಿದ್ದಾರೆ. ಜಾಗತಿಕ ಸಹಯೋಗ ಬಲಪಡಿಸಲು ಸಮ್ಮೇಳನ ಸಹಕಾರಿಯಾಗಿದೆ ಎಂದು ತಿಳಿಸಿದರು.

ಮೂರು ದಿನಗಳ ಸಮ್ಮೇಳನದಲ್ಲಿ ವಿವಿಧ ದೇಶಗಳ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು, ಶೈಕ್ಷಣಿಕ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದಾರೆ. ಸಾಮಾಜಿಕ ನ್ಯಾಯ, ನವೀನ ಪದ್ಧತಿಗಳು, ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಬಡತನ ನಿರ್ಮೂಲನೆಗೆ ಅಂತರ್ ಶಿಸ್ತೀಯ ವಿಧಾನಗಳ ಬಗ್ಗೆ ಚರ್ಚೆಗಳು ನಡೆದವು.

ರೇವಾ ವಿಶ್ವವಿದ್ಯಾನಿಲಯದ ಕುಲಪತಿ ಸಂಜಯ್ ಆರ್. ಚಿಟ್ನಿಸ್ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.