ಶನಿವಾರ, ಜೂನ್ 12, 2021
28 °C

ಗುಣಮಟ್ಟದ ಶಿಕ್ಷಣ ನೀಡುವಲ್ಲಿ ರಾಜಿ ಇಲ್ಲ : ಡಾ.ಪಿ. ಶ್ಯಾಮರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೇವಾ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ. ಶ್ಯಾಮರಾಜು ಬರೆದಿರುವ ‘ರಿಇಮ್ಯಾಜಿನಿಂಗ್ ಎಜುಕೇಷನ್‌ ಅಟ್‌ ರೇವಾ’ ಪುಸ್ತಕವನ್ನು ಬುಧವಾರ ಬಿಡುಗಡೆ ಮಾಡಲಾಯಿತು. 

‘ಕೋವಿಡ್‌ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರ ಹಲವು ಸವಾಲುಗಳನ್ನು ಎದುರಿಸುತ್ತಿದೆ. ವಿದ್ಯಾರ್ಥಿಗಳು ಕೂಡ ವಿಭಿನ್ನ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಪರೀಕ್ಷೆ ಎದುರಿಸುವಾಗಲೂ ವಿದ್ಯಾರ್ಥಿಗಳು ಅನೇಕ ಸವಾಲುಗಳನ್ನು ಎದುರಿಸಬೇಕಾಗಿದೆ. ಈ ಸಂದರ್ಭದಲ್ಲಿ ಅವರ ಮುಂದಿರುವ ಅವಕಾಶಗಳ ಕುರಿತು ಈ ಪುಸ್ತಕದಲ್ಲಿ ವಿವರಿಸಲಾಗಿದೆ’ ಎಂದು ಶ್ಯಾಮರಾಜು ಹೇಳಿದರು. 

‘ಗುಣಮಟ್ಟದ ಶಿಕ್ಷಣದ ವಿಷಯದಲ್ಲಿ ರೇವಾ ವಿಶ್ವವಿದ್ಯಾಲಯ ಯಾವತ್ತೂ ರಾಜಿ ಮಾಡಿಕೊಂಡಿಲ್ಲ. ಅಲ್ಲದೆ, ವಿಭಿನ್ನ ಕಲಿಕಾ ವಿಧಾನಗಳನ್ನು ಅಳವಡಿಸಿಕೊಳ್ಳುವಲ್ಲಿಯೂ ಹಿಂದೆ ಬಿದ್ದಿಲ್ಲ. ಅದೇ ರೀತಿ, ಈಗ ತೀರಾ ಅಗತ್ಯವಾಗಿರುವ ಆನ್‌ಲೈನ್‌ ಶಿಕ್ಷಣ ಅಥವಾ ಬೋಧನೆಯಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ’ ಎಂದು ಅವರು ಹೇಳಿದರು. 

‘ಆನ್‌ಲೈನ್‌ ಬೋಧನೆಯಲ್ಲಿ ಅನುಸರಿಸುತ್ತಿರುವ ಕ್ರಮಗಳು ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿವೆ. ಪೋಷಕರು ಕೂಡ ಇವುಗಳನ್ನು ಒಪ್ಪಿದ್ದಾರೆ. ಇದಲ್ಲದೆ, ವಿಶೇಷ ಆನ್‌ಲೈನ್‌ ಸರ್ಟಿಫಿಕೇಟ್‌ ಕೋರ್ಸ್‌ಗಳನ್ನು ಕೂಡ ಪ್ರಾರಂಭಿಸಲಾಗಿದೆ’ ಎಂದು ಅವರು ಹೇಳಿದರು. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.