ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇವಾ ವಿ.ವಿ: ‘ಜೀವಸೇತು’ ಬಿಡುಗಡೆ

Last Updated 25 ಏಪ್ರಿಲ್ 2020, 21:46 IST
ಅಕ್ಷರ ಗಾತ್ರ

ಯಲಹಂಕ: ರೇವಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕೊರೊನಾ ಸೋಂಕಿತ ರೋಗಿಗಳಿಗೆ ಅನುಕೂಲವಾಗಲೆಂದು, ನೂತನವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿರುವ ‘ಜೀವಸೇತು’ ಪೋರ್ಟಬಲ್‌ ವೆಂಟಿಲೇಟರ್ ಅನ್ನು ಶನಿವಾರ ಬಿಡುಗಡೆಗೊಳಿಸಲಾಯಿತು.

‘ಕೋವಿಡ್-19ರ ವಿರುದ್ಧ ಇಡೀ ದೇಶವೇ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶ ನಮ್ಮದಾಗಿತ್ತು. ಈ ಕುರಿತು ವೈದ್ಯರೊಂದಿಗೆ ಚರ್ಚಿಸಿದಾಗ, ಉಸಿರಾಟದ ಸಮಸ್ಯೆ ನಿವಾರಣೆಗೆ ಅನುಕೂಲವಾಗುವ ವೆಂಟಿಲೇಟರ್‌ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದರು. ನಮ್ಮ ವಿ.ವಿ ತಂಡ ಈ ನಿಟ್ಟಿನಲ್ಲಿ ಶ್ರಮಿಸಿ, ವೆಂಟಿಲೇಟರ್‌ ವಿನ್ಯಾಸಗೊಳಿಸಿದೆ’ ಎಂದುವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಶ್ಯಾಮರಾಜು ತಿಳಿಸಿದರು.

‘ಸದ್ಯಕ್ಕೆ ₹35 ಸಾವಿರ ವೆಚ್ಚದಲ್ಲಿ ಎರಡು ವೆಂಟಿಲೇಟರ್‌ಗಳನ್ನು ಸಿದ್ಧಪಡಿಸಲಾಗಿದೆ. ಆರ್ಕಿಟೆಕ್ಚರ್, ಮೆಕಾನಿಕಲ್, ಎಲೆಕ್ಟ್ರಿಕಲ್ಸ್‌, ಎಲೆಕ್ಟ್ರಾನಿಕ್ಸ್‌ ಹಾಗೂ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ವಿದ್ಯಾರ್ಥಿಗಳು ಒಗ್ಗೂಡಿ ಇದನ್ನು ಅಭಿವೃದ್ಧಿ ಪಡಿಸಿದ್ದು, ತಜ್ಞ ವೈದ್ಯರು ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದರು.

‘ಸಾಮಾಜಿಕ ಕಾರ್ಯ ಮಾಡುತ್ತಿರುವ ಆಸ್ಪತ್ರೆಗಳಿಗೆ ಕಡಿಮೆ ದರದಲ್ಲಿ ವೆಂಟಿಲೇಟರ್‌ ಪೂರೈಸಲು ಆದ್ಯತೆ ನೀಡಲಾಗುವುದು. ಭವಿಷ್ಯದಲ್ಲೂ ಈ ಸಾಧನ ಸಿದ್ಧಪಡಿಸುವ ಗುರಿ ಹೊಂದಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT