ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ: ಪಿಐಎಲ್‌ಗೆ ಮನವಿ

Last Updated 26 ನವೆಂಬರ್ 2022, 19:19 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಚಿಲುಮೆ ಸಂಸ್ಥೆ ಮತ್ತು ಈ ಅಕ್ರಮದ ಹಿಂದಿರುವವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು’ ಎಂದು ಕೋರಿ, ‘ನೈಜ ಹೋರಾಟಗಾರರ ವೇದಿಕೆ’ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರಿಗೆ ಮನವಿ ಸಲ್ಲಿಸಿದೆ.

ವೇದಿಕೆಯ ಮುಖಂಡ ಎಚ್.ಎಂ.ವೆಂಕಟೇಶ್‌ ಈ ಸಂಬಂಧ ಮನವಿ ಪತ್ರ ಬರೆದಿದ್ದು, ‘ಮತ ದಾರರ ಖಾಸಗಿ ಮಾಹಿತಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಮತ್ತು ಹಲಸೂರು ಗೇಟ್‌ ಪೊಲೀಸ್‌ ಠಾಣೆಗಳಲ್ಲಿ 2 ಕ್ರಿಮಿನಲ್‌ ಪ್ರಕರಣ ದಾಖಲಾಗಿವೆ. ಸರ್ಕಾರದಿಂದ ಸತ್ಯಾಸತ್ಯತೆ ಹೊರಬರುವ ನಂಬಿಕೆಯಿಲ್ಲ. ಕಾರಣ, ತಾವು ಮಧ್ಯ ಪ್ರವೇಶಿಸಿ ನ್ಯಾಯಮೂರ್ತಿಗಳ ಸುಪರ್ದಿಯಲ್ಲಿಯೇ ಈ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು. ‘ಕಾನೂನಿನ ಚೌಕಟ್ಟಿನಡಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ನಮ್ಮ ಈ ಮನವಿಯನ್ನು ಪಿಐಎಲ್‌ ಆಗಿ ಪರಿಗಣಿಸಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT