ಯಲಹಂಕ: ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 9ನೇ ಘಟಿಕೋತ್ಸವ ಸಮಾರಂಭದಲ್ಲಿ ವಿವಿಧ ವಿಷಯಗಳಲ್ಲಿ ಪದವಿಗಳನ್ನು ಪೂರ್ಣಗೊಳಿಸಿದ 4537 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

3311 ವಿದ್ಯಾರ್ಥಿಗಳಿಗೆ ಪದವಿ, 1156 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ, 70 ಮಂದಿಗೆ ಪಿಎಚ್.ಡಿ. ಪದವಿ ಪ್ರದಾನ ಮಾಡಲಾಯಿತು. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತ್ಯುತ್ತಮ ಸಾಧನೆಗೈದ 66 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ)ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಮಾತನಾಡಿ, ‘ಭಾರತೀಯ ಪ್ರಜೆಗಳಾಗಿ ನಮ್ಮ ಸಂವಿಧಾನ, ಇಲ್ಲಿನ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಚುನಾವಣಾ ಪ್ರಕ್ರಿಯೆಗಳು, ನ್ಯಾಯಾಂಗ ಹಾಗೂ ಮಾಧ್ಯಮದಂತಹ ದೃಢವಾದ ಸಂಸ್ಥೆಗಳ ಬಗ್ಗೆ ಹೆಮ್ಮೆ ಪಡಬೇಕು. ಇವೆಲ್ಲವೂ ನಮ್ಮ ಸಂವಿಧಾನದ ಮೌಲ್ಯಗಳಲ್ಲಿಯೇ ಅಡಕವಾಗಿವೆ’ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣನೀತಿಯ ಚೌಕಟ್ಟು, ಸಾಂವಿಧಾನಿಕ ಮೌಲ್ಯದಲ್ಲಿದೆ. ಪ್ರಗತಿಪರ, ಒಳಗೊಳ್ಳುವ ಮತ್ತು ಸುಸ್ಥಿರ ಭವಿಷ್ಯದ ಭಾರತೀಯ ಶಿಕ್ಷಣವ್ಯವಸ್ಥೆಯ ಸುಧಾರಣೆ ಮಾಡುವುದು ಇದರ ಮುಖ್ಯಗುರಿ. ಸಂವಿಧಾನದ ಸಮಾನತೆ ಮತ್ತು ಒಳಗೊಳ್ಳುವಿಕೆಯ ಬದ್ಧತೆಗೆ ಶಿಕ್ಷಣ ನೀತಿ ಪೂರಕವಾಗಿದೆ. ಅಶಕ್ತ ಗುಂಪಿನಿಂದ ಬಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸಂಪರ್ಕ ಒದಗಿಸಲಿದೆ ಎಂದು ಹೇಳಿದರು.

ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು ಮಾತನಾಡಿ, ‘ವಿಶ್ವವಿದ್ಯಾಲಯದ ಸ್ಥಿರ ಮತ್ತು ವೇಗವಾದ ಪ್ರಗತಿಯ ಹಿಂದಿನ ಪ್ರೇರಕ ಶಕ್ತಿಯಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಿದ್ದಾರೆ’ ಎಂದು ಕೃತಜ್ಞತೆ ಸಲ್ಲಿಸಿದರು.

ರೇವಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಎನ್.ರಮೇಶ್, ಸಹ ಕುಲಪತಿ ಉಮೇಶ್ ಎಸ್.ರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.