ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವರ್ಷದಿಂದಲೇ ಮುಖದ ಗುರುತು ಕಡ್ಡಾಯ

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌
Last Updated 2 ಮಾರ್ಚ್ 2020, 19:25 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಒಬ್ಬರ ಹೆಸರಲ್ಲಿ ಇನ್ನೊಬ್ಬರು ಪರೀಕ್ಷೆ ಬರೆಯುವ ಅಕ್ರಮ ತಡೆಗಟ್ಟುವ ಸಲುವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು (ಆರ್‌ಜಿಯುಎಚ್‌ಎಸ್‌) ಮುಖದ ಗುರುತನ್ನು ದಾಖಲಿಸುವುದನ್ನು ಕಡ್ಡಾಯಗೊಳಿಸಿದೆ.

2020–21ನೇ ಸಾಲಿನಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ಪ್ರವೇಶ ಪಡೆಯುವವರ ಮುಖದ ಗುರುತನ್ನು (ಫೇಸ್‌ ಐಡಿ) ಆಯಾ ಕಾಲೇಜುಗಳು ಸ್ಕ್ಯಾನ್‌ ಮಾಡಬೇಕು. ಇತರ ಎಲ್ಲ ದಾಖಲೆಗಳ ಜತೆಗೆ ಮುಖದ ಸ್ಕ್ಯಾನ್‌ ಮಾಹಿತಿಯನ್ನೂ ವಿಶ್ವವಿದ್ಯಾಲಯಕ್ಕೆ ಒದಗಿಸಬೇಕು. ವಿಶ್ವವಿದ್ಯಾಲಯವು ಈ ನಿಟ್ಟಿನಲ್ಲಿ ಶೀಘ್ರವೇ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಿದೆ.

‘ಆಧಾರ್‌ ಗುರುತಿನ ರೀತಿಯಲ್ಲಿ ಈ ಮುಖದ ಗುರುತು ಸಹ ಕೆಲಸ ಮಾಡುತ್ತದೆ. ಇದರಿಂದ ಒಬ್ಬರ ಹೆಸರಲ್ಲಿ ಇನ್ನೊಬ್ಬರು ಪರೀಕ್ಷೆ ಬರೆಯುವುದು ಸಾಧ್ಯವಾಗುವುದಿಲ್ಲ’ ಎಂದು ಕುಲಪತಿ ಡಾ.ಎಸ್‌.ಸಚ್ಚಿದಾನಂದ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT