ಬುಧವಾರ, ಡಿಸೆಂಬರ್ 2, 2020
20 °C

ಬೆಂಗಳೂರು: ಲಾಕ್‌ಡೌನ್ ವೇಳೆ 300 ಕಿ.ಮೀ ವೇಗದಲ್ಲಿ ಬೈಕ್ ಓಡಿಸಿದ್ದ ಸವಾರ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ 299 ಕಿ.ಮೀ ವೇಗದಲ್ಲಿ ಬೈಕ್ ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಕುತ್ತು ತರಲು ಯತ್ನಿಸಿದ ಆರೋಪದಡಿ ಸವಾರ ಮುನಿಯಪ್ಪ ಎಂಬುವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐಷಾರಾಮಿ ಬೈಕ್‌ನಲ್ಲಿ ಇತ್ತೀಚೆಗೆ ಹೊಸೂರು ರಸ್ತೆಗೆ ಬಂದಿದ್ದ ಮುನಿಯಪ್ಪ, ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ 299 ಕಿ.ಮೀ (ಗಂಟೆಗೆ) ವೇಗದಲ್ಲಿ ಬೈಕ್ ಚಲಾಯಿಸಿದ್ದರು. ಇದರ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್  ಮಾಡಿದ್ದರು.

ವಿಡಿಯೊ ಗಮನಿಸಿದ್ದ ಸಿಸಿಬಿ ಪೊಲೀಸರು, ಸ್ವಯಂಪ್ರೇರಿತವಾಗಿ ತನಿಖೆ ಕೈಗೊಂಡು ಸವಾರ ಮುನಿಯಪ್ಪ ಅವರನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಬೈಕ್ ಸಹ ಜಪ್ತಿ ಮಾಡಿದ್ದಾರೆ. ನಂತರ ಆರೋಪಿಯನ್ನು ಸಂಚಾರ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ.

‘ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಸಾಗಣೆ ವಾಹನಗಳು ಮಾತ್ರ ಸಂಚರಿಸುತ್ತಿವೆ. ಇಂಥ ವೇಳೆಯಲ್ಲಿ ಮುನಿಯಪ್ಪ, ಅಪಾಯಕಾರಿ ರೀತಿಯಲ್ಲಿ ಬೈಕ್ ಚಲಾಯಿಸಿದ್ದರು’ ಎಂದು ಸಿಸಿಬಿಯ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು