ಬೆಂಗಳೂರು: ಪಬ್ ಎದುರು ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೋರಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಗಲಾಟೆಯಲ್ಲಿ ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಉಳಿದವರು ಪರಾರಿ ಆಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೇರಳದ ಜಿಪ್ಸನ್ ಜಾರ್ಜ್(29), ಮೆರಿಕ್(29) ಮತ್ತು ರಿಫಾಯ್(22) ಬಂಧಿತರು.

ಘಟನೆಯಲ್ಲಿ ಯದು ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಏನಿದು ಘಟನೆ?: ಜೂನ್ 7ರಂದು ಮಧ್ಯರಾತ್ರಿ 1ರ ಸುಮಾರಿಗೆ ಕೋರಮಂಗಲದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಒಂದು ಗುಂಪಿನ ಸದಸ್ಯರು, ಯುವತಿಯನ್ನು ಮಾತನಾಡಿಸಲು ಯತ್ನಿಸಿದ್ದರು. ಆಕೆಯ ಸ್ನೇಹಿತರು ಎದುರಾಳಿ ಗುಂಪಿನೊಂದಿಗೆ ವಾಗ್ವಾದ ನಡೆಸಿದ್ದರು. ಅದು ವಿಕೋಪಕ್ಕೆ ತಿರುಗಿ ಯದು ಎಂಬುವವರ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದರು.

‘ಯುವತಿ ವಿಚಾರಕ್ಕೆ ಕೇರಳದ ಯುವಕರ ಗುಂಪು ಪಬ್ವೊಂದರ ಎದುರು ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಲ್ಲುಗಳನ್ನು ಎಸೆದು ಹಲ್ಲೆ ಮಾಡಿಕೊಂಡಿದ್ದರು. ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು. ಆ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.