ಶನಿವಾರ, ಅಕ್ಟೋಬರ್ 1, 2022
20 °C

ಹೆಗ್ಗನಹಳ್ಳಿಯಲ್ಲಿ ಗಲಾಟೆ: ಚಾಕುವಿನಿಂದ ಇರಿತಕ್ಕೆ ಒಳಗಾದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೆಗ್ಗನಹಳ್ಳಿಯಲ್ಲಿ ಬುಧವಾರ ರಾತ್ರಿ ನಡೆದ ಗಲಾಟೆಯಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾದ ಅಜಿಮುಲ್ಲಾ ಖಾನ್ (43) ಎಂಬುವರು ಮೃತಪಟ್ಟಿದ್ದಾರೆ.

ಅಜಿಮುಲ್ಲಾ ಖಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು ಆರೋಪಿ ಚಾಕುವಿ‌ನಿಂದ ಇರಿದು ಪರಾರಿಯಾಗಿದ್ದಾನೆ‌.

ಘಟನೆಗೆ ಕಾರಣ ತಿಳಿದುಬಂದಿಲ್ಲ. ಆರೋಪಿಯ ಹಿನ್ನೆಲೆಯ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು