ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬೈಕ್ ಸವಾರರಿಬ್ಬರ ಸಾವು

Last Updated 24 ಮಾರ್ಚ್ 2019, 19:20 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಎಡೇಹಳ್ಳಿ ಸಮೀಪ ಭಾನುವಾರ ಬೆಳಿಗ್ಗೆ, ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.ಬೈಕ್‌ ಸವಾರಅಲ್ಲಾಹುದ್ದೀನ್(25) ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಪ್ರಿನ್ಸ್‌ ಕುಮಾರ್‌ ಸಿಂಗ್(26) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇವರು ಬಿಹಾರ ರಾಜ್ಯದವರಾಗಿದ್ದು, ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಎಡೇಹಳ್ಳಿ ಬಳಿಯ ಹೆದ್ದಾರಿಯಲ್ಲಿ ಕೈಗಾರಿಕಾ ವಲಯಕ್ಕೆ ಹೋಗಲು ತಿರುವು ಇದೆ. ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು, ಇದೇ ತಿರುವಿನ ಹತ್ತಿರ ಬರುತ್ತಿದ್ದಂತೆ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಕಾರು ಜಕ್ಕಂಗೊಂಡಿದೆ. ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಕಾರಿನ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT