ಭಾನುವಾರ, ನವೆಂಬರ್ 28, 2021
20 °C

ರಸ್ತೆ ವಿಭಜಕಕ್ಕೆ ಗುದ್ದಿದ್ದ ಕಾರು: ಇಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೊಸೂರು ರಸ್ತೆಯ ಸೇಂಟ್‌ ಜಾನ್ಸ್ ಆಸ್ಪತ್ರೆ ವೃತ್ತದಲ್ಲಿ ರಸ್ತೆ ವಿಭಜಕಕ್ಕೆ ಕಾರು ಗುದ್ದಿ ಉರುಳಿಬಿದ್ದಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

‘ಗುರುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎರಡು ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಡಿವಾಳ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಸ್ನೇಹಿತರಿಬ್ಬರು, ಮಾರುತಿ ಸುಜುಕಿ ‘ಬಲೆನೊ’ ಕಾರಿನಲ್ಲಿ ಹೊರಟಿದ್ದರು. ಮದ್ಯದ ಅಮಲಿನಲ್ಲಿದ್ದ ಚಾಲಕ, ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದ. ರಸ್ತೆ ವಿಭಜಕಕ್ಕೆ ಕಾರು ಗುದ್ದಿಸಿದ್ದ. ಇದರಿಂದ ರಸ್ತೆಯಲ್ಲೇ ಕಾರು ಉರುಳಿ ಬಿದ್ದಿತ್ತು’ ಎಂದೂ ತಿಳಿಸಿದರು.

‘ಪ್ರಕರಣ ದಾಖಲಿಸಿಕೊಂಡು ಕಾರು ಜಪ್ತಿ ಮಾಡಲಾಗಿದೆ. ಚಾಲಕನನ್ನು ವಿಚಾರಣೆ ನಡೆಸಬೇಕಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು