ಸೋಮವಾರ, ಸೆಪ್ಟೆಂಬರ್ 26, 2022
24 °C

ಹದಗೆಟ್ಟ ರಸ್ತೆ: ಬೈಕ್‌ನಿಂದ ಬಿದ್ದ ಬಾಲಕನ ಮೇಲೆ ಹರಿದ ಸೇನಾ ವಾಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ಹದಗೆಟ್ಟ ರಸ್ತೆಯಿಂದಾಗಿ ಬಾಲಕನೊಬ್ಬ ಸಾವಿಗೀಡಾದ ಘಟನೆ ಬೆಂಗಳೂರಿನ ಕೆ.ಆರ್.ಪುರದಲ್ಲಿ ನಡೆದಿದೆ. ತಂದೆ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಜೀವನ್ (10) ಮೃತ ದುರ್ದೈವಿ.

ಮೃತ ಬಾಲಕನ ತಂದೆ ಪೊಲೀಸ್ ಹೆಡ್ ಕಾನ್ಸ್‌ಟೆಬಲ್‌ ಆಗಿದ್ದು, ಸಂಜೆ ಮಗನ ಜೊತೆ ಬೈಕ್‌ನಲ್ಲಿ ಕೆ.ಆರ್‌.ಪುರದ ಮಾರುಕಟ್ಟೆಗೆ ಹೋಗುತ್ತಿದ್ದರು. ಇತ್ತೀಚಿಗೆ ಸುರಿದ ಮಳೆಯಿಂದ ರಸ್ತೆ ಹದಗೆಟ್ಟಿತ್ತು. ರಸ್ತೆಯಲ್ಲಿ ಹರಡಿಕೊಂಡಿದ್ದ ಪುಡಿ ಜಲ್ಲಿಯಿಂದಾಗಿ ಬೈಕ್ ಸ್ಕಿಡ್ ಆಗಿದ್ದು, ಬಾಲಕ ಆಯತಪ್ಪಿ ರಸ್ತೆ ಮೇಲೆ ಬಿದ್ದಿದ್ದಾನೆ. ಹಿಂದೆಯಿಂದ ಬಂದ ಸೇನೆಗೆ ಸೇರಿದ ವಾಹನ ಆತನ ಮೇಲೆ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಾಹನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು