ಶನಿವಾರ, ಫೆಬ್ರವರಿ 29, 2020
19 °C

ಅಪಘಾತ: ಮೊಹಮ್ಮದ್‌ ನಲಪಾಡ್‌ಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಖ್ರಿ ವೃತ್ತ ಸಮೀಪದ ಕೆಳಸೇತುವೆಯಲ್ಲಿ ಸಂಭವಿಸಿದ್ದ ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್‌ಗೆ ಸದಾಶಿವನಗರ ಸಂಚಾರ ಪೊಲೀಸರು ನೋಟಿಸ್ ನೀಡಿದ್ದಾರೆ.

ಅಪಘಾತದ ವೇಳೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಠಾಣೆಗೆ ಬಂದು ತನ್ನದೇ ಕಾರು ಎಂದಿದ್ದ. ಆದರೆ, ಆತನ ಹೇಳಿಕೆಯಲ್ಲಿ ಗೊಂದಲ ಇದೆ. ಅನುಮಾನವೂ ಉಂಟಾಗಿದೆ. ಹೀಗಾಗಿ ನೋಟಿಸ್ ನೀಡಲಾಗಿದ್ದು, ವಿಚಾರಣೆ ಬಳಿಕವೇ ನಿಖರ ಮಾಹಿತಿ ತಿಳಿಯಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.

ಅಪಘಾತ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರು ಗಾಯಗೊಂಡಿದ್ದು, 6 ವರ್ಷದ ಬಾಲಕನೂ ಇದ್ದಾನೆ.

ಈ ಹಿಂದೆ ಉದ್ಯಮಿ ಲೋಕನಾಥ್ ಅವರ ಮಗ ವಿದ್ವತ್ ಮೇಲೆ ಹಲ್ಲೆ ಮಾಡಿದ್ದ ನಲಪಾಡ್, ಜೈಲುವಾಸ ಅನುಭವಿಸಿದ್ದ. ಜಾಮೀನು ಮೇಲೆ ಹೊರಗೆ ಬಂದಿದ್ದ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು