ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ಅಮೃತಹಳ್ಳಿ ಅಶ್ವತಕಟ್ಟೆ ರಸ್ತೆ ನಿವಾಸಿ ನಾಗರಾಜ (57) ಮೃತರು.

ನಾಗರಾಜ ಅವರು ಪ್ರಾವಿಷನ್ ಸ್ಟೋರ್ ಹೊಂದಿದ್ದರು. ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಅವರು, ಬ್ಯಾಟರಾಯನಪುರ ಜಂಕ್ಷನ್ ಬಳಿ ಬೆಳಗಿನ ಜಾವ ರಸ್ತೆ ದಾಟುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದು, ಕಿವಿಯಲ್ಲಿ ರಕ್ತ ಸೋರಿಕೆಯಾಗಿದೆ. ಸ್ಥಳೀಯರ ಸಹಕಾರದೊಂದಿಗೆ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕನ ಪತ್ತೆಗೆ ಶೋಧ ಕೈಗೊಂಡಿದ್ದಾರೆ.