ಬುಧವಾರ, ಆಗಸ್ಟ್ 17, 2022
28 °C

‌ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಥಣಿಸಂದ್ರ-ರಾಚೇನಹಳ್ಳಿ ಮಾರ್ಗವಾಗಿ ಮೇಸ್ತ್ರಿಪಾಳ್ಯದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಒಂದು ವರ್ಷದಿಂದ ಈ ರಸ್ತೆ ಹಾಳಾಗಿ ಜನರು ತೊಂದರೆ ಅನುಭವಿಸುತ್ತಿದ್ದರು. ಈ ಹಿಂದೆ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಈ ರಸ್ತೆಗಳು, ಒಳಚರಂಡಿ ಮತ್ತು ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಕಾಮಗಾರಿ ಕೈಗೊಂಡಿದ್ದ ಸಂದರ್ಭದಲ್ಲಿ ಹಾಳಾಗಿದ್ದವು. ಹಾಗಾಗಿ ಮತ್ತೊಮ್ಮೆ ಈ ಸಂಪರ್ಕ ರಸ್ತೆಯನ್ನು ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ಈ ಭಾಗದ ಜನರ ಸಮಸ್ಯೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.

ಕೊಳವೆಬಾವಿ ಉದ್ಘಾಟನೆ: ರೈಲ್ವೆಮ್ಯಾನ್ ಲೇಔಟ್‌ನಲ್ಲಿ ನೂತನವಾಗಿ ಸ್ಥಾಪಿಸಿರುವ ಕೊಳವೆ ಬಾವಿಯನ್ನು ಉದ್ಘಾಟಿಸಿದ ಅವರು, ಈ ಭಾಗದಲ್ಲಿ ಅಂತರ್ಜಲಮಟ್ಟ ಸಾಕಷ್ಟು ಕುಸಿದಿರುವುದರಿಂದ ನೀರಿನ ಸಮಸ್ಯೆಯಿದೆ. ಒಂದು ಕೊಳವೆಬಾವಿಯಲ್ಲಿ ನೀರು ಸಿಕ್ಕಿರುವುದರಿಂದ ಮನೆಗಳಿಗೆ ನೀರು ಒದಗಿಸುವ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ಪಳನಿ ವೆಂಕಟೇಶ್, ಡಿ.ಬಿ.ಸುರೇಶ್ ಗೌಡ, ಕರಿಯಪ್ಪ, ಹಾಲಪ್ಪ, ಮರಿಮಾದಯ್ಯ, ಬಸವರಾಜು, ಮಹೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು