‘ತಿಂಗಳಾಂತ್ಯಕ್ಕೆ ಕಾಯಂ ಪೌರಕಾರ್ಮಿಕರ ಪಟ್ಟಿ’
‘ಕಾಯಂಗೊಳ್ಳಲಿರುವ ಪೌರಕಾರ್ಮಿಕ ಪಟ್ಟಿಯನ್ನು ಈ ತಿಂಗಳ ಅಂತ್ಯಕ್ಕೆ ಪ್ರಕಟಿಸಲಾಗುವುದು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ. ಸಾಲಪ್ಪ ಅವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿರುವ ಸಾಲಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ‘ಕಾಯಂಗೊಳಿಸುವ ಪ್ರಕ್ರಿಯೆ ಪೂರ್ಣಗೊಳಿಸುವುದು ಸೇರಿದಂತೆ ಅವರಿಗೆ ತಾಂತ್ರಿಕ ಅತ್ಯುತ್ತಮ ರಕ್ಷಣಾ ಉಪಕರಣಗಳನ್ನೂ ನೀಡಲಾಗುತ್ತದೆ’ ಎಂದು ತಿಳಿಸಿದರು. ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಉಪ ಆಯುಕ್ತ ಮಂಜುನಾಥ್ ಸ್ವಾಮಿ ಉಪಸ್ಥಿತರಿದ್ದರು.