‘₹2ಲಕ್ಷ ವೆಚ್ಚದಲ್ಲಿ ರಸ್ತೆ ದುರಸ್ತಿ

7

‘₹2ಲಕ್ಷ ವೆಚ್ಚದಲ್ಲಿ ರಸ್ತೆ ದುರಸ್ತಿ

Published:
Updated:
Deccan Herald

ಕುದೂರು(ಮಾಗಡಿ): ಕಣ್ಣೂರು ಪಾಳ್ಯಗೇಟ್‌ನಿಂದ ನಾಗನಹಳ್ಳಿ ಸಂಪರ್ಕ ರಸ್ತೆಯನ್ನು ₹2ಲಕ್ಷ ವೆಚ್ಚದಲ್ಲಿ ದುರಸ್ತಿಪಡಿಸಲಾಗುವುದು ಎಂದು ಶಾಸಕ ಎ.ಮಂಜುನಾಥ ತಿಳಿಸಿದರು.

ಕುದೂರು–ಹೊನ್ನುಡಿಕೆ ರಸ್ತೆ ಕಣ್ಣೂರುಪಾಳ್ಯದ ಗೇಟ್‌ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸುಗ್ಗನಹಳ್ಳಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಬಳಿ ಇರುವ ಯಾತ್ರಿ ನಿವಾಸ್‌ ಕಟ್ಟಡ ಸರಿಯಾಗಿ ನಿರ್ವಹಣೆ ಇಲ್ಲದೆ ಭೂತಬಂಗಲೆಯಂತಿದೆ. ಮುಜರಾಯಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕಣ್ಣೂರು ಗ್ರಾಮದಲ್ಲಿ ಚಿರತೆ ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಿಡಿದು ಜನರಿಗೆ ರಕ್ಷಣೆ ನೀಡಬೇಕಿದೆ. ಹೋಬಳಿಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಗ್ರಾಮ ಪಂಚಾಯಿತಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೆ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯ ನರಸಿಂಹ ಮೂರ್ತಿ, ಕಣ್ಣೂರು ಗ್ರಾಮಪಂಚಾಯಿತಿ ಅಧ್ಯಕ್ಷ ಬೋಜಣ್ಣ, ಪಿಡಿಒ ಪ್ರಭುಮಹಲಿಂಗಯ್ಯ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !