ಶನಿವಾರ, ಮಾರ್ಚ್ 6, 2021
28 °C

ಚಾಕುವಿನಿಂದ ಇರಿದು ಉದ್ಯಮಿ ಸುಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿನ್ನಯ್ಯನಪಾಳ್ಯದಲ್ಲಿ ಉದ್ಯಮಿ ರಂಗನಾಥ್ ಎಂಬುವರನ್ನು ಚಾಕುವಿನಿಂದ ಇರಿದು ಮೊಬೈಲ್ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಿಲ್ಸನ್‌ಗಾರ್ಡನ್ ಸಮೀಪದ ಚಿನ್ನಯ್ಯನಪಾಳ್ಯ ನಿವಾಸಿಯಾದ ಉದ್ಯಮಿ ರಂಗನಾಥ್ ಗುಪ್ತಾ ಹಲ್ಲೆಗೊಳಗಾದವರು. ಅವರ ಪುತ್ರಿ ನೀಡಿರುವ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಆಡುಗೋಡಿ ಪೊಲೀಸರು ತಿಳಿಸಿದರು.

‘ರಂಗನಾಥ್ ಗುಪ್ತಾ ಅವರು ಕೆಲಸ ನಿಮಿತ್ತ ಕೊಯಮತ್ತೂರಿಗೆ ತೆರಳಲು ನ. 24ರ ನಸುಕಿನ ಜಾವ 3 ಗಂಟೆಗೆ ಚಿನ್ನಯ್ಯನಪಾಳ್ಯದ ರಸ್ತೆಯಲ್ಲಿ ಸ್ನೇಹಿತರ ಕಾರಿಗಾಗಿ ಕಾಯುತ್ತಿದ್ದರು. ಅದೇ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು, ರಂಗನಾಥ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.’

‘ಹಲ್ಲೆಯಿಂದಾಗಿ ರಂಗನಾಥ್ ಅವರ ಹೊಟ್ಟೆ, ಕೈ, ಕಾಲಿಗೆ ಗಾಯಗಳಾಗಿವೆ. ರಸ್ತೆಯಲ್ಲಿ ನರಳುತ್ತ ಬಿದ್ದಿದ್ದ ರಂಗನಾಥ್ ಅವರನ್ನು ಗಸ್ತಿನಲ್ಲಿದ್ದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೃತ್ಯ ನಡೆದ ಸ್ಥಳದಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು