ಗುರುವಾರ , ಮೇ 19, 2022
21 °C

ಸುಲಿಗೆ ಪ್ರಕರಣ: ಭದ್ರಾವತಿಯಲ್ಲಿ ಆರೋಪಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೃದ್ಧೆಯೊಬ್ಬರ ಮೇಲೆ ಹಲ್ಲೆ ಮಾಡಿ ಚಿನ್ನದ ಸರ ಕಿತ್ತೊಯ್ದಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ನರೇಂದ್ರ ಬಾಬು (46) ಎಂಬುವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ವಿದ್ಯಮಾನ ನಗರದಲ್ಲಿ ಏಪ್ರಿಲ್ 20ರಂದು ಬಾಡಿಗೆ ಕೇಳುವ ನೆಪದಲ್ಲಿ ವೃದ್ಧೆಯೊಬ್ಬರ ಮೇಲೆ ಹಲ್ಲೆ ಮಾಡಿ, 48 ಗ್ರಾಂ ಚಿನ್ನದ ಸರ ಸುಲಿಗೆ ಮಾಡಲಾಗಿತ್ತು. ಗಾಯಗೊಂಡ ವೃದ್ಧೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅವರು ನೀಡಿದ್ದ ದೂರಿನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಸುಲಿಗೆ ಪ್ರಕರಣದಲ್ಲಿ ನರೇಂದ್ರ ಬಾಬು ಭಾಗಿಯಾದ ಬಗ್ಗೆ ಮಾಹಿತಿ ಇತ್ತು. ಹೀಗಾಗಿ, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಅವರು ಭದ್ರಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕುಟುಂಬಸ್ಥರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು