ಬೆಂಗಳೂರು: ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ನಾಯಿಯನ್ನು (23) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಹುಳಿಮಾವು ಠಾಣೆ ವ್ಯಾಪ್ತಿಯ ಅರಕೆರೆ ಬಳಿ ಫೆ. 27ರಂದು ಮಾರಕಾಸ್ತ್ರ ಸಮೇತ ರೌಡಿ ಕಾಣಿಸಿಕೊಂಡಿದ್ದ. ರಸ್ತೆಯಲ್ಲಿ ಹೋಗುವ ಜನರನ್ನು ತಡೆದು ಸುಲಿಗೆ ಮಾಡಲು ಹೊಂಚು ಹಾಕಿದ್ದ. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆತನನ್ನು ಬಂಧಿಸಲಾಯಿತು. ಮಾರಕಾಸ್ತ್ರವನ್ನೂ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಸಂತೋಷ್ ಕುಮಾರ್ ಆರೋಪಿಯಾಗಿದ್ದ. ಅದೇ ಠಾಣೆ ರೌಡಿ ಪಟ್ಟಿಯಲ್ಲಿ ಆತನ ಹೆಸರಿದೆ’ ಎಂದೂ ಮೂಲಗಳು ತಿಳಿಸಿವೆ.

ಶಿವಾಜಿ ಸುರತ್ಕಲ್ 2: ‘ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಪೋಸ್ಟರ್ ಬಿಡುಗಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.