ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಿಗೆ; ತಿಪ್ಪೆ, ಅಮಾವಾಸ್ಯೆ ಬಂಧನ

Last Updated 11 ಜೂನ್ 2021, 18:26 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡಿ ಅದರಲ್ಲೇ ನಗರದಲ್ಲಿ ಸುತ್ತಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

‘ಯಶವಂತ್ ಅಲಿಯಾಸ್ ತಿಪ್ಪೆ ಹಾಗೂ ಕಿರಣ್ ಅಲಿಯಾಸ್ ಅಮಾವಾಸ್ಯೆ ಬಂಧಿತರು. ಅವರಿಂದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳು, ಅದರಲ್ಲೇ ರಾತ್ರಿ ನಗರದಲ್ಲಿ ಸುತ್ತಾಡುತ್ತಿದ್ದರು. ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರು ಹಾಗೂ ಡೆಲಿವರಿ ಬಾಯ್‌ಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದರು.’

‘ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಎಸಗಿದ್ದ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT