ಮಂಗಳವಾರ, ಜನವರಿ 18, 2022
22 °C

ಮನೆಗೆ ನುಗ್ಗಿ ಸುಲಿಗೆ; ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿ ಸುಲಿಗೆ ಮಾಡಿದ್ದ ಆರೋಪದಡಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

‘ಕೋಣನಕುಂಟೆ ನಿವಾಸಿ ವೆಂಕಟೇಶ್ (20), ಹಿರಿಯೂರಿನ ಸುನೀಲ್ (21), ದೊಡ್ಡಕಲ್ಲಸಂದ್ರದ ಮಂಜ (26), ಶಿವರಾಜ್ (28) ಹಾಗೂ ಜಗದೀಶ್ ರೆಡ್ಡಿ (20) ಬಂಧಿತರು. ಅವರಿಂದ 9 ಗ್ರಾಂ ಚಿನ್ನಾಭರಣ, ಮೊಬೈಲ್, ಕೃತ್ಯಕ್ಕೆ ಬಳಸಿದ್ದ ಚಾಕು, ಆಟೊ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಹಿಳೆಯೊಬ್ಬರೇ ಮನೆಯಲ್ಲಿದ್ದರು. ಅದನ್ನು ತಿಳಿದುಕೊಂಡು ಮನೆಗೆ ನ. 26ರಂದು ಸಂಜೆ ನುಗ್ಗಿದ್ದ ಆರೋಪಿಗಳು, ಚಾಕು ತೋರಿಸಿ ಬೆದರಿಸಿದ್ದರು. ಮನೆಯಲ್ಲೆಲ್ಲ ಹುಡುಕಾಡಿದ್ದರು. ಯಾವುದೇ ಚಿನ್ನಾಭರಣ ಸಿಕ್ಕಿರಲಿಲ್ಲ. ಮಹಿಳೆ ಧರಿಸಿದ್ದ ಚಿನ್ನದ ಸರ ಹಾಗೂ ಮೊಬೈಲ್ ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.