ಶುಕ್ರವಾರ, ಜೂಲೈ 3, 2020
22 °C

ದರೋಡೆಗೆ ಸಂಚು: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಂಜಯನಗರದ ಸಂತೋಷ್‌ಕುಮಾರ್ ಅಲಿಯಾಸ್ ಮೇಕೆ, ಶಶಿಕುಮಾರ್ ಅಲಿಯಾಸ್ ಕುಳ್ಳ, ಆರ್. ಭಾಸ್ಕರ್, ಸ್ಟೀಫನ್ ರಾಜ್ ಹಾಗೂ ಆರ್. ಕುಮಾರ್ ಅಲಿಯಾಸ್ ಬೆಟ್ಟ ಬಂಧಿತರು. ಎಚ್‌ಎಎಲ್ ಠಾಣೆ ವ್ಯಾಪ್ತಿಯ ಸ್ಮಶಾನ ಬಳಿ ಸೇರಿದ್ದ ಆರೋಪಿ
ಗಳು ಮಾರಕಾಸ್ತ್ರಗಳನ್ನು ಹಿಡಿದು ನಿಂತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು