ಮಂಗಳವಾರ, ಡಿಸೆಂಬರ್ 1, 2020
17 °C

ಪೊಲೀಸರ ಸೋಗಿನಲ್ಲಿ ಸುಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿರುವ ಆಭರಣ ಮಳಿಗೆಗೆ ಪೊಲೀಸರ ಸೋಗಿನಲ್ಲಿ ನುಗ್ಗಿದ್ದ ದುಷ್ಕರ್ಮಿಗಳು, ಚಿನ್ನಾಭರಣ ಸುಲಿಗೆ ಮಾಡಿದ್ದಾರೆ.

‘ನಗರ್ತಪೇಟೆಯಲ್ಲಿರುವ ಗೀತಾ ಜ್ಯುವೆಲರ್ಸ್ ಮಳಿಗೆ ಮಾಲೀಕ ಕಾರ್ತಿಕ್ ಎಂಬುವರು ದೂರು ನೀಡಿದ್ದಾರೆ. ಕೃತ್ಯ ಎಸಗಿದ್ದ ಆರೋಪದಡಿ, ನಾಗಮಂಗಲದ ನಿವಾಸಿಗಳು ಎನ್ನಲಾದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ನ. 11ರ ತಡರಾತ್ರಿ ಪೊಲೀಸ್ ಸಮವಸ್ತ್ರದಲ್ಲಿ ಮಳಿಗೆಗೆ ಹೋಗಿದ್ದ ಆರೋಪಿಗಳು, ‘ದೀಪಾವಳಿ ಹಬ್ಬಕ್ಕೆ ನಕಲಿ‌ ಚಿನ್ನ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಬಂದಿದೆ. ಹೀಗಾಗಿ, ಮಳಿಗೆ ತಪಾಸಣೆ ಮಾಡಲು ಬಂದಿದ್ದೇವೆ’ ಎಂದಿದ್ದರು. ಸಿಬ್ಬಂದಿಯನ್ನು ಬೆದರಿಸಿ ಮಾಲೀಕ ಕಾರ್ತಿಕ್ ಅವರಿಗೂ ಕರೆ ಮಾಡಿದ್ದರು. ಮಳಿಗೆಯಲ್ಲಿದ್ದ ಸುಮಾರು 300 ಗ್ರಾಂ ಚಿನ್ನಾಭರಣವನ್ನು ಚೀಲದಲ್ಲಿ ಕಟ್ಟಿಕೊಂಡಿದ್ದ ಆರೋಪಿಗಳು, ‘ಪೊಲೀಸ್ ಠಾಣೆಗೆ ಬಂದು ಆಭರಣ ಬಿಡಿಸಿಕೊಂಡು ಹೋಗಿ’ ಎಂದು ಹೊರಟು ಹೋಗಿದ್ದರು.’

‘ಮಳಿಗೆ ಮಾಲೀಕರು ಠಾಣೆಗೆ ಬಂದು ವಿಚಾರಿಸಿದ್ದರು. ಮಳಿಗೆಗೆ ಬಂದವರು ನಕಲಿ ಪೊಲೀಸರು ಎಂಬುದು ಅವಾಗಲೇ ಗೊತ್ತಾಗಿತ್ತು. ಬಳಿಕ ಠಾಣೆಗೆ ದೂರು ನೀಡಿದ್ದರು. ಮಳಿಗೆಗೆ ಬರುವಾಗ ಆರೋಪಿಗಳು ಕಾರಿನಲ್ಲಿ ಬಂದಿದ್ದರು. ಅದರ ನೋಂದಣಿ ಸಂಖ್ಯೆ ಆಧರಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು