ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಚ್ಮಂಡ್ ವೃತ್ತ: ಚಾಕು ಹಿಡಿದು ಹಗಲಿನಲ್ಲೇ ಸುಲಿಗೆ

Last Updated 1 ಸೆಪ್ಟೆಂಬರ್ 2021, 15:48 IST
ಅಕ್ಷರ ಗಾತ್ರ

ಬೆಂಗಳೂರು: ಯುವಕನೊಬ್ಬ ಚಾಕು ಹಿಡಿದುಕೊಂಡು ಹಗಲಿನಲ್ಲೇ ಸುಲಿಗೆಗೆ ಯತ್ನಿಸಿರುವ ಘಟನೆ ರಿಚ್ಮಂಡ್ ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಆರೋಪಿ ಯುವಕನ ಕೃತ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ತನ್ನನ್ನು ಹಿಡಿಯಲು ಬಂದ ಸಾರ್ವಜನಿಕರಿಗೂ ಚಾಕು ತೋರಿಸಿ ಬೆದರಿಸಿ ಆರೋಪಿ ಪರಾರಿಯಾಗಿದ್ದಾನೆ.

ರಸ್ತೆಯಲ್ಲಿ ಹೊರಟಿದ್ದ ಕಾರು ಅಡ್ಡಗಟ್ಟಿದ್ದ ಆರೋಪಿ, ಚಾಕು ತೋರಿಸಿ ಮೊಬೈಲ್ ಹಾಗೂ ಹಣ ಕಿತ್ತುಕೊಳ್ಳಲು ಯತ್ನಿಸಿದ್ದ. ಗಾಬರಿಗೊಂಡ ಚಾಲಕ, ಸಹಾಯಕ್ಕಾಗಿ ಕೂಗಾಡಿದ್ದರು. ಸ್ಥಳದಲ್ಲಿದ್ದ ಕೆಲವರು, ಯುವಕನನ್ನು ಹಿಡಿಯಲು ಮುಂದಾಗಿದ್ದರು. ಆದರೆ, ಯುವಕ ತಪ್ಪಿಸಿಕೊಂಡು ಓಡಲಾರಂಭಿಸಿದ್ದ. ಈ ದೃಶ್ಯ ವಿಡಿಯೊದಲ್ಲಿದೆ.

ಐದಾರು ಮಂದಿ ಬೆನ್ನಟ್ಟಿ ಯುವಕನನ್ನು ಹಿಡಿದು ಚಾಕು ಕಸಿದುಕೊಳ್ಳಲು ಮುಂದಾಗಿದ್ದರು. ಆತನನ್ನು ಥಳಿಸಿದ್ದರು. ಎಲ್ಲರನ್ನೂ ತಳ್ಳಿದ್ದ ಯುವಕ, ವಾಹನಗಳ ಮಧ್ಯೆ ನುಸುಳಿಕೊಂಡು ಪರಾರಿಯಾಗಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT