ಮಂಗಳವಾರ, ಮೇ 18, 2021
30 °C

ದುಶ್ಚಟಗಳಿಗೆ ಹಣ ಹೊಂದಿಸಲು ಮೊಬೈಲ್ ಸುಲಿಗೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹಲವು ಕಡೆ ಸಾರ್ವಜನಿಕರನ್ನು ಬೆದರಿಸಿ ಮೊಬೈಲ್ ಸುಲಿಗೆ ಮಾಡಿದ್ದ ಆರೋಪದಡಿ ಧನುಷ್ ಅಲಿಯಾಸ್ ಡಿ.ಡಿ (18) ಎಂಬಾತನನ್ನೂ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.

‘ಜೆ.ಸಿ.ನಗರ ಬೆನ್ಸನ್ ಟೌನ್ ಬಳಿಯ ಚಿನ್ನಪ್ಪ ಗಾರ್ಡನ್ ನಿವಾಸಿ ಧನುಷ್, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 4.50 ಲಕ್ಷ ಮೌಲ್ಯದ 32 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ದೂರುದಾರ ಪ್ರಕಾಶ್ ರಾನಡೆ ಫೆ. 10ರಂದು ಸಂಜೆ ಎ.ಇ.ಸಿ.ಎಸ್ ಲೇಔಟ್‌ನ 7ನೇ ಮುಖ್ಯರಸ್ತೆಯಲ್ಲಿ ವಾಯುವಿಹಾರ ಮಾಡುತ್ತಿದ್ದರು. ದ್ವಿಚಕ್ರ ವಾಹನ
ದಲ್ಲಿ ಬಂದಿದ್ದ ಇಬ್ಬರು, ಮೊಬೈಲ್ ಕಿತ್ತುಕೊಂಡು ಹೋಗಿದ್ದರು. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು’ ಎಂದರು.

‘ಚಿಕ್ಕ ವಯಸ್ಸಿನಿಂದಲೇ ಅಪರಾಧ ಕೃತ್ಯ ಎಸಗುತ್ತಿರುವ ಧನುಷ್, ಮದ್ಯಪಾನ ಹಾಗೂ ಧೂಮಪಾನ ವ್ಯಸನಿ. ದುಶ್ಚಟಗಳಿಗೆ ಹಣ ಹೊಂದಿಸಲು ಆತ ಸುಲಿಗೆ ಮಾಡುತ್ತಿದ್ದ. ಸಂಜಯನಗರ, ಕೊಡಿಗೇಹಳ್ಳಿ, ಸದಾಶಿವನಗರ, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಹೆಬ್ಬಾಳ, ಆರ್‌.ಟಿ.ನಗರ, ಕೆ.ಆರ್.ಪುರ, ಎಚ್‌ಎಎಲ್‌ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿಯೂ ಧನುಷ್ ಸುಲಿಗೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ತನ್ನದೇ ಗ್ಯಾಂಗ್ ಕಟ್ಟಿಕೊಂಡಿದ್ದ ಆರೋಪಿ, ಸಹಚರ ರನ್ನು ಜೊತೆಯಲ್ಲಿ ಕರೆದೊಯ್ದು ಬೆಳಿಗ್ಗೆ ಹಾಗೂ ಸಂಜೆ ಒಂಟಿ
ಯಾಗಿ ಓಡಾಡುತ್ತಿದ್ದವರನ್ನು ಸುಲಿಗೆ ಮಾಡುತ್ತಿದ್ದ. ಮೊಬೈಲ್‌ಗಳನ್ನು ಮಾರಾಟ ಮಾಡಿ ಬಂದ ಹಣವನ್ನು ದುಶ್ಚಟ
ಗಳಿಗೆ ಖರ್ಚು ಮಾಡುತ್ತಿದ್ದ. ಠಾಣೆ ವ್ಯಾಪ್ತಿಯಲ್ಲಿ ಫೆ. 16ರಂದು ಅನುಮಾನಾಸ್ಪದವಾಗಿ ಆರೋಪಿ ಓಡಾಡುತ್ತಿದ್ದ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡ’ ಎಂದೂ ಪೊಲೀಸರು ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.