ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಸುಲಿಗೆಗೆ ಹೊಂಚು: ಆಟೊ ಚಾಲಕರಿಬ್ಬರ ಬಂಧನ

Published 19 ಮೇ 2024, 15:08 IST
Last Updated 19 ಮೇ 2024, 15:08 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಜನರನ್ನು ಸುಲಿಗೆ ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕಾವಲ್‌ಭೈರಸಂದ್ರದ ಮುಬಾರಕ್ ಪಾಷಾ ಹಾಗೂ ಗೋವಿಂದಪುರದ ಫರಾಜ್ ಷರೀಫ್ ಬಂಧಿತರು. ಇವರಿಬ್ಬರೂ ಆಟೊ ಚಾಲಕರು. ಇವರಿಬ್ಬರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಚೇಳಿಕೆರೆ ಬಳಿಯ ಪೂಜಪ್ಪ ಬಡಾವಣೆಯಲ್ಲಿ ಆರೋಪಿಗಳು ಅನುಮಾನಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಯನ್ನು ವಿಚಾರಿಸಿದ್ದರು. ಇದೇ ಸಂದರ್ಭದಲ್ಲಿ ಆರೋಪಿಗಳ ಬಳಿ ಮಾರಕಾಸ್ತ್ರಗಳಿರುವುದು ಗೊತ್ತಾಗಿತ್ತು. ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ, ಅಪರಾಧ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಸಂಗತಿ ಪತ್ತೆಯಾಯಿತು’ ಎಂದು ಪೊಲೀಸರು ತಿಳಿಸಿದರು.

‘ರಸ್ತೆಯಲ್ಲಿ ನಡೆದುಕೊಂಡು ಹೋಗುವ ಜನರನ್ನು ಬೆದರಿಸಿ ಸುಲಿಗೆ ಮಾಡಲು ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕಾಗಿ ಎರಡು ಲಾಂಗ್‌ಗಳನ್ನು ಇಟ್ಟುಕೊಂಡಿದ್ದರು. ಲಾಂಗ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT