ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೊಲೀಸ್ ಸೋಗಿನಲ್ಲಿ ಮನೆಗೆ ನುಗ್ಗಿ ₹ 2.50 ಲಕ್ಷ ಸುಲಿಗೆ

Published 25 ಡಿಸೆಂಬರ್ 2023, 20:09 IST
Last Updated 25 ಡಿಸೆಂಬರ್ 2023, 20:09 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ಡ್ರಗ್ಸ್ ಮಾರಾಟ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹ 2.50 ಲಕ್ಷ ಸುಲಿಗೆ ಮಾಡಿದ್ದು, ಈ ಸಂಬಂದ ಎಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ಥಳೀಯ ಮೂರನೇ ಹಂತದ ನಿವಾಸಿ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಡಿ. 17ರಂದು ರಾತ್ರಿ ದೂರುದಾರ ಹಾಗೂ ಅವರ ಪತ್ನಿ ಮನೆಯಲ್ಲಿದ್ದಾಗ, ದುಷ್ಕರ್ಮಿ ನುಗ್ಗಿದ್ದ. ಪೊಲೀಸ್ ಎಂಬುದಾಗಿ ಬೆದರಿಸಿ ಕೆಲ ಎಟಿಎಂ ಕಾರ್ಡ್‌ಗಳನ್ನು ಪಡೆದುಕೊಂಡಿದ್ದ. ದೂರುದಾರರನ್ನು ಹೊರಗೆ ಕರೆದೊಯ್ದು ಎಟಿಎಂ ಯಂತ್ರದಲ್ಲಿ ಹಣ ಡ್ರಾ ಮಾಡಿಸಿಕೊಂಡು ಆರೋಪಿ ಪರಾರಿಯಾಗಿದ್ದಾನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT