ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಏಕಕಾಲದಲ್ಲಿ ಎರಡು ರೋಬೊಗಳ ನೆರವಿನಿಂದ ಶಸ್ತ್ರಚಿಕಿತ್ಸೆ ನಡೆಸಿ, ದಾನಿಯಿಂದ ಪಡೆದ ಮೂತ್ರಪಿಂಡವನ್ನು ರೋಗಿಗೆ ಕಸಿ ಮಾಡಿದ್ದಾರೆ.

ಈ ಬಗ್ಗೆ ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಮೂತ್ರಪಿಂಡ ವಿಜ್ಞಾನದ ಪ್ರಧಾನ ನಿರ್ದೇಶಕ ಡಾ. ಮೋಹನ್ ಕೇಶವಮೂರ್ತಿ, ‘ಈ ಕಸಿ ಶಸ್ತ್ರಚಿಕಿತ್ಸೆಗೆ ‘ಟ್ರೀಟ್’ ಎಂಬ ನೂತನ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದ್ದು, ಏಕಕಾಲದಲ್ಲಿ ಎರಡು ರೋಬೊಗಳ ನೆರವಿನಿಂದ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದೆ. ಈ ವಿನೂತನ ಪ್ರಯತ್ನದಿಂದ ನಿಖರ ಶಸ್ತ್ರಚಿಕಿತ್ಸೆ ಸಾಧ್ಯವಾಗಿದೆ. ದಾನಿ, ರೋಗಿ ಇಬ್ಬರೂ ಬೇಗ ಚೇತರಿಸಿಕೊಳ್ಳಲಿದ್ದಾರೆ’ ಎಂದು ತಿಳಿಸಿದರು.

‘ತಾಂಜಾನಿಯದ 47 ವರ್ಷದ ವ್ಯಕ್ತಿ ಹಾಗೂ ವಿಜಯಪುರದ 35 ವರ್ಷದ ಮಹಿಳೆಗೆ ನೂತನ ವಿಧಾನದಲ್ಲಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇವರಿಗೆ ಸಹೋದರರೆ ಮೂತ್ರಪಿಂಡ ದಾನ ಮಾಡಿದ್ದಾರೆ. ರೋಗಿಗಳು ಹಾಗೂ ದಾನಿಗಳು ಅಲ್ಪಾವಧಿಯಲ್ಲಿಯೇ ಚೇತರಿಸಿಕೊಂಡಿದ್ದಾರೆ. ದಾನಿಗಳು ಸಹ ಯಾವುದೇ ಭಯವಿಲ್ಲದೆ ಅಂಗಾಂಗ ದಾನ ಮಾಡಬಹುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.