ಬೆಂಗಳೂರು: ರೋಟರಿ ಬೆಂಗಳೂರು ಉದ್ಯೋಗ್ ಸಂಸ್ಥೆಯು ಇದೇ 22ರಂದು ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ರಜತ ಮಹೋತ್ಸವ ಸಮಾರಂಭ ಹಮ್ಮಿಕೊಂಡಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ರವಿರಾಜ್ ಶೆಟ್ಟಿ, ‘ಶಾಲೆಗಳಿಗೆ ಮೂಲಸೌಕರ್ಯ, ಕಡಿಮೆ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಸೇರಿ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಸಂಸ್ಥೆ ಕೈಗೊಂಡಿದೆ. ಈ ಕಾರ್ಯಕ್ರಮಗಳ ಆರ್ಥಿಕ ಬೆಂಬಲಕ್ಕೆ ಗಾಯಕರಾದ ವಿಜಯ ಪ್ರಕಾಶ್ ಮತ್ತು ಅನುರಾಧಾ ಭಟ್ ತಂಡದಿಂದ ಸಂಗೀತ ಸಂಜೆಯನ್ನು ಏರ್ಪಡಿಸಲಾಗಿದೆ’ ಎಂದರು.

‘ಸಂಸ್ಥೆ ವತಿಯಿಂದ ಐದು ಡಯಾಲಿಸಿಸ್ ಯಂತ್ರಗಳನ್ನ ವಿವಿಧ ಆಸ್ಪತ್ರೆಗಳಿಗೆ ವಿತರಣೆ ಮಾಡಲಾಗಿದ್ದು, ರವಿ ಕಿರ್ಲೋಸ್ಕರ್ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರವನ್ನು ನಮ್ಮ ಸಂಸ್ಥೆಯೇ ನಿರ್ವಹಿಸುತ್ತಿದೆ. ಅತಿ ಕಡಿಮೆ ಶುಲ್ಕದಲ್ಲಿ ಡಯಾಲಿಸಿಸ್ ಸೇವೆಯನ್ನು ಬಡವರಿಗೆ ನೀಡುತ್ತಿದ್ದೇವೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.