ಶನಿವಾರ, ಆಗಸ್ಟ್ 13, 2022
27 °C

ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರವ್ಯಾಪಿ ಬಂದ್‌ ಹಿನ್ನೆಲೆಯಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳ ಲಾಗಿದ್ದು, ಮೆರವಣಿಗೆ ಸಾಗುವ ರಸ್ತೆಯಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಭಾರತ್ ಕಮ್ಯೂನಿಸ್ಟ್ ಪಕ್ಷ, ಕನ್ನಡ ಚಳವಳಿ ವಾಟಾಳ್ ಪಕ್ಷ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಇತರೆ ಸಂಘಟನೆಗಳು ಪುರಭವನದಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಡಿ. 8ರ ಬೆಳಿಗ್ಗೆ ಮೆರವಣಿಗೆ ಹಮ್ಮಿಕೊಂಡಿವೆ. ಈ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

‘ಹಲಸೂರು ಗೇಟ್ ಠಾಣೆ ಕಡೆ ಯಿಂದ ಬರುವ ವಾಹನಗಳು, ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದು ನೃಪತುಂಗ ರಸ್ತೆಯಲ್ಲಿ ಸಂಚರಿಸಬಹುದಾಗಿದೆ. ನೃಪತುಂಗ ರಸ್ತೆಯಲ್ಲಿ ಪೊಲೀಸ್‌ ಕಾರ್ನರ್‌ನಿಂದ ಕೆ.ಆರ್. ವೃತ್ತದವರೆಗೂ ದ್ವಿಮುಖ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ’ ಎಂದು ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.