ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ: ಮಾರ್ಗ ಬದಲಾವಣೆ

Published 16 ಏಪ್ರಿಲ್ 2024, 15:58 IST
Last Updated 16 ಏಪ್ರಿಲ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯಲ್ಲಿ ಇದೇ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಹೆಬ್ಬಾಳ–ಕೆ.ಆರ್.ಪುರ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್‌ ಅಳವಡಿಸುವ ಕಾಮಗಾರಿ ಆರಂಭವಾಗಿದೆ. ಆದ್ದರಿಂದ, ಕೆ.ಆರ್.ಪುರ ಲೂಪ್‌ ಸೇತುವೆ ಮೇಲೆ ವಾಹನ ಸಂಚಾರವನ್ನು ಸುಮಾರು ಆರು ತಿಂಗಳ ನಿಷೇಧಿಸಲಾಗಿದೆ. 

‘ಕೆ.ಆರ್.ಪುರ, ನಾಗಾವರ ಕಡೆಯಿಂದ ಬಂದು ಮೇಖ್ರಿ ವೃತ್ತಕ್ಕೆ ಹೋಗುವ ಅಪ್‌ ರ್‍ಯಾಂಪ್‌ ಮೇಲೆ ದ್ವಿಚಕ್ರ ವಾಹನ ಹೊರತುಪಡಿಸಿ ಉಳಿದ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ’ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮಾರ್ಗ ಬದಲಾವಣೆ: ನಾಗವಾರ (ಹೊರವರ್ತುಲ ರಸ್ತೆ) ಕಡೆಯಿಂದ ಮೇಖ್ರಿ ವೃತ್ತದ ಮೂಲಕ ಬರುತ್ತಿದ್ದ ವಾಹನಗಳು, ಹೆಬ್ಬಾಳ ವೃತ್ತದ ಮೇಲ್ಸೇತುವೆ ಕೆಳಗಿನಿಂದ ಬಲಕ್ಕೆ ತಿರುವು ಪಡೆದು ಕೊಡಿಗೆಹಳ್ಳಿ ಜಂಕ್ಷನ್‌ ಬಳಿ ಯೂಟರ್ನ್ ಪಡೆದು ಸರ್ವೀಸ್‌ ರಸ್ತೆಯಿಂದ ಹೆಬ್ಬಾಳ ಮೇಲ್ಸೇತುವೆ ರ್‍ಯಾಂಪ್‌ ಮೂಲಕ ನಗರ ಪ್ರವೇಶಿಸಬಹುದು.

ಕೆ.ಆರ್.ಪುರ, ನಾಗಾವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು, ಐಒಸಿ–ಮುಕುಂದ ಥಿಯೇಟರ್‌ ರಸ್ತೆ, ಲಿಂಗರಾಜಪುರ ಮೇಲ್ಸೇತುವೆ ಮಾರ್ಗ, ನಾಗಾವಾರ ಟ್ಯಾನರಿ ರಸ್ತೆ ಮಾರ್ಗವಾಗಿ ನಗರಕ್ಕೆ ಪ್ರವೇಶಿಸಬಹುದು. ಹೆಗಡೆನಗರ- ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿಕೆವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.

ಕೆ.ಆರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಮೇಲ್ಸೇತುವೆ ಕೆಳಗಡೆ ನೇರವಾಗಿ ಬಿಇಎಲ್ ವೃತ್ತ ತಲುಪಿ, ಎಡಕ್ಕೆ ತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐಐಎಸ್ಸಿ ಮೂಲಕ ಚಲಿಸಬಹುದು. ಕೆ.ಆರ್‌. ಪುರ, ಹೆಣ್ಣೂರು, ಎಚ್‌ಆರ್‌ಬಿಆರ್‌ ಲೇಔಟ್, ಕೆ.ಜಿ. ಹಳ್ಳಿ, ಬಾಣಸವಾಡಿ ಕಡೆಗಳಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಹೋಗುವ ವಾಹನಗಳು ಹೆಣ್ಣೂರು–ಬಾಗಲೂರು ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT