ಬೆಂಗಳೂರು: ಕಾಮಾಕ್ಷಿಪಾಳ್ಯ, ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸಿದ್ದ ಎಂಬಾತನನ್ನು ಬುಧವಾರ ನಸುಕಿನಲ್ಲಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.

15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಿದ್ದ ಅಲಿಯಾಸ್ ಸಿದ್ದರಾಜು ಅಲಿಯಾಸ್ ಬಗಲಗುಂಟೆ ಸಿದ್ದ ತಲೆಮರೆಸಿಕೊಂಡು ಓಡಾಡುತ್ತಿದ್ದ.

ಬ್ಯಾಡರಹಳ್ಳಿಯ ಆಶ್ರಯ ಬಡವಣೆಯಲ್ಲಿ ಸಿದ್ದ ಇರುವ ಬಗ್ಗೆ ಮಾಹಿತಿ ಪಡೆದ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರಾಜೀವ್ ನೇತೃತ್ವದ ತಂಡ ಆತನನ್ನು ಬಂಧಿಸಲು ಕಾರ್ಯಾಚರಣೆ ನಡೆಸಿತ್ತು. ಆತನಿಗೆ ಶರಣಾಗುವಂತೆ ಎಚ್ಚರಿಕೆ ನೀಡಿದರೂ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಕಾನ್ ಸ್ಟೆಬಲ್ ಹನುಮಂತರಾಜು ಎಂಬವರಿಗೆ ಗಾಯವಾಗಿದೆ.

ಆತ್ಮರಕ್ಷಣೆಗಾಗಿ ರಾಜೀವ್ ಅವರು ಸಿದ್ದನ ಮೇಲೆ ಗುಂಡು ಹೊಡೆದಿದ್ದಾರೆ. ಬಲಕಾಲಿಗೆ ಗುಂಡು ತಗುಲಿದ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.