ಸೋಮವಾರ, ಮೇ 16, 2022
24 °C

ದರೋಡೆಗೆ ಸಂಚು: ರೌಡಿ ಹಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಗ್ಗೆರೆ ಮೇಲ್ಸೇತುವೆ ಬಳಿ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಸಂಚು ರೂಪಿಸಿದ್ದ ರೌಡಿ ಚೇತನ್ ಅಲಿಯಾಸ್ ಹಂದಿ ಹಾಗೂ ಆತನ 6 ಸಹಚರರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಚೇತನ್‌, ಸಹಚರರ ಜೊತೆ ಸೇರಿ ಅಪರಾಧ ಕೃತ್ಯ ಎಸಗುತ್ತಿದ್ದ. ಆತನ ದರೋಡೆ ಸಂಚಿನ ಬಗ್ಗೆ ಮೇ 9ರಂದು ಮಾಹಿತಿ ಸಿಕ್ಕಿತ್ತು. ಕಾರ್ಯಾಚರಣೆ ನಡೆಸಿ ಕಾರು ಹಾಗೂ ಮಾರಕಾಸ್ತ್ರಗಳ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಂಧಿತರ ವಿರುದ್ಧ ಮಹಾಲಕ್ಷ್ಮಿಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು