ಭಾನುವಾರ, ಜೂನ್ 26, 2022
28 °C

‘ರೌಡಿ’ ಆಗಬೇಕೆಂದು ದರೋಡೆಗೆ ಸಂಚು: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾವು ‘ರೌಡಿ’ ಆಗಬೇಕು. ತಮ್ಮನ್ನು ನೋಡಿ ಎಲ್ಲರೂ ಭಯಪಡಬೇಕು ಎಂದುಕೊಂಡು ದರೋಡೆ ಮಾಡಲು ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಭೋಗನಹಳ್ಳಿ ನಿವಾಸಿ ಕೀರ್ತಿ (23) ಹಾಗೂ ಮಂಜುನಾಥ್ (23) ಬಂಧಿತರು. ಅವರಿಂದ 9 ಲಾಂಗ್, ಡ್ರ್ಯಾಗರ್ ಹಾಗೂ ಎರಡು ಬೈಕ್‌ ಜಪ್ತಿ ಮಾಡಲಾಗಿದೆ. ಮೂವರು ಸಹಚರರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಬೆಳ್ಳಂದೂರು ರೈಲ್ವೆ ನಿಲ್ದಾಣ ಬಳಿ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಆರೋಪಿಗಳು, ದಾರಿಯಲ್ಲಿ ಬರುವ ಸಾರ್ವಜನಿಕರಿಗಾಗಿ ಕಾಯುತ್ತಿದ್ದರು. ಅವರಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡುವ ಉದ್ದೇಶ ಅವರದ್ದಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು