ಬೆಂಗಳೂರು: ಸಿಸಿಬಿಯ ಸಂಘಟಿತ ಅಪರಾಧ ದಳದ ಅಧಿಕಾರಿಗಳು ರೌಡಿ ಶೀಟರ್ ಭರತ್ ಕುಮಾರ್ ಅಲಿಯಾಸ್ ಗುಡ್ಡೆ ಭರತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಮೈಸೂರು ರಸ್ತೆ ಎನ್ಟಿವೈ ಲೇಔಟ್ ನಿವಾಸಿ ಭರತ್ 2016ರಿಂದಲೂ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಈತನ ವಿರುದ್ಧ ಕೊಲೆ ಯತ್ನ, ಹಲ್ಲೆ, ಸುಲಿಗೆ, ಅತ್ಯಾಚಾರ, ಮಕ್ಕಳ ಮೇಲೆ ದೌರ್ಜನ್ಯ, ಡ್ರಗ್ಸ್ ಮಾರಾಟ ಸೇರಿ 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈತನ ಬಂಧನಕ್ಕೆ ಪೊಲೀಸ್ ಕಮಿಷನರ್ ಅನುಮತಿ ಸಿಕ್ಕ ಬೆನ್ನಲ್ಲೇ, ಸಿಸಿಬಿ ಅಧಿಕಾರಿಗಳು ಬಂಧಿಸಿ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.