ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ ರೌಡಿ ಹಿದಾಯತ್ ಖಾನ್ ಎಂಬಾತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ತೀವ್ರ ಗಾಯಗೊಂಡಿರುವ ಹಿದಾಯತ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಲಗ್ಗೆರೆಯಲ್ಲಿ ಮಂಗಳವಾರ ಮಧ್ಯಾಹ್ನ 4.30ರ ಸುಮಾರಿಗೆ ಈ ಘಟನೆ ನಡೆದಿದೆ.

‘ಡಿ.ಜೆ.ಹಳ್ಳಿ ನಿವಾಸಿಯಾದ ಹಿದಾಯತ್ ಖಾನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಡಿ.ಜೆ.ಹಳ್ಳಿ ಠಾಣೆಯಲ್ಲೇ ಆತನ ವಿರುದ್ಧ ರೌಡಿ ಪಟ್ಟಿ ತೆರೆಯಲಾಗಿತ್ತು. ಹಳೆಯ ದ್ವೇಷದಿಂದಾಗಿ ಎದುರಾಳಿ ತಂಡದವರೇ ಆತನ ಮೇಲೆ ಹಲ್ಲೆ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.

‘ವಾಹನದಲ್ಲಿ ಬಂದಿದ್ದರು ಎನ್ನಲಾದ ನಾಲ್ವರು ದುಷ್ಕರ್ಮಿಗಳು, ಹಿದಾಯತ್ ಮೇಲೆ ಮನಬಂದಂತೆ ಮಾರಕಾಸ್ತ್ರ ಬೀಸಿದ್ದಾರೆ. ಹಿದಾಯತ್ನ ಕೈ, ಕಾಲು ಹಾಗೂ ದೇಹದ ಹಲವೆಡೆ ಗಾಯಗಳಾಗಿವೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.