ಗುರುವಾರ , ಏಪ್ರಿಲ್ 15, 2021
20 °C

ಜೈಲಲ್ಲೇ ರೌಡಿ ಹುಟ್ಟುಹಬ್ಬ; ಹರಿದಾಡಿದ ವಿಡಿಯೊ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ರೌಡಿ ರಿಜ್ವಾನ್‌, ಜೈಲಿನ ಬ್ಯಾರಕ್‌ನಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ

ಸುಬ್ರಹ್ಮಣ್ಯಪುರ ಠಾಣೆ ರೌಡಿ ಪಟ್ಟಿಯಲ್ಲಿ ರಿಜ್ವಾನ್‌ ಹೆಸರಿದ್ದು, ಆತನನ್ನು ಗೂಂಡಾ ಕಾಯ್ದೆಯಡಿ ಇತ್ತೀಚೆಗೆ ಬಂಧಿಸಲಾಗಿತ್ತು. ಜೈಲಿನಲ್ಲಿರುವ ಆತ, ಸಹ ಕೈದಿಗಳ ಜೊತೆ ಸೇರಿ ಕೇಕ್ ಕತ್ತರಿಸಿದ್ದಾನೆ. ಆ ವಿಡಿಯೊವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಹಿನ್ನೆಲೆಯಲ್ಲಿ ಚಿತ್ರಗೀತೆ ಅಳವಡಿಸಲಾಗಿದೆ.

ಅಪರಾಧ ಪ್ರಕರಣದಲ್ಲಿ ಜೈಲು ಸೇರಿರುವ ರೌಡಿಗೆ ಕೇಕ್‌ ಹಾಗೂ ಮೊಬೈಲ್‌ ನೀಡಿದ್ದು ಯಾರು? ಚಿತ್ರೀಕರಣ ಮಾಡಿದ್ದು ಯಾರು? ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಜೈಲಿನ ಅಧಿಕಾರಿಗಳು ನಿರಾಕರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು