ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿ ನಾಗ್‌ ಸಹಚರರ ಬಂಧನ

Last Updated 23 ಮೇ 2021, 21:05 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ದರೋಡೆ ಸಂಚು ರೂಪಿಸಿದ್ದ ಆರೋಪದಡಿ ರೌಡಿ ನಾಗ್‌ ಗ್ಯಾಂಗ್‌ನಲ್ಲಿದ್ದ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಜಾನ್‌ ವಿಲಿಯಂ ಅಲಿಯಾಸ್ ಅಪ್ಪು (29), ಶಶಿಧರ್ ಅಲಿಯಾಸ್ ಗುಂಡ (31), ಪಾರ್ತಿಬನ್ (33) ಹಾಗೂ ಮೈಕಲ್ ಅಲಿಯಾಸ್ ಜಾನ್ಸನ್ (23) ಬಂಧಿತರು. ಅವರಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ವಿಲ್ಸನ್ ಗಾರ್ಡನ್‌ ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರಿರುವ ನಾಗ್‌ನ ಸಹಚರರಾದ ಆರೋಪಿಗಳು, ಶಾಂತಿನಗರದ ಬರ್ಲಿ ಸ್ಟ್ರೀಟ್ ರಸ್ತೆಯಲ್ಲಿರುವ ಸೆಮೆಟ್ರಿ ಬಳಿ ಶನಿವಾರ ನಿಂತಿದ್ದರು. ರಸ್ತೆಯಲ್ಲಿ ಒಂಟಿಯಾಗಿ ಬರುವ ಸಾರ್ವಜನಿಕರನ್ನು ಕಾಯುತ್ತ ಮಾರಕಾಸ್ತ್ರ ಹಿಡಿದುಕೊಂಡು ಕಾಯುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.

’ಬಂಧಿತರಾದ ಜಾನ್‌ ವಿಲಿಯಂ ಹಾಗೂ ಮೈಕಲ್ ಹೆಸರು ಸಹ ವಿಲ್ಸನ್ ಗಾರ್ಡನ್ ಠಾಣೆಯ ರೌಡಿ ಪಟ್ಟಿಯಲ್ಲಿದೆ. ಶಶಿಧರ್ ವಿರುದ್ಧ ಅಶೋಕನಗರ ಠಾಣೆ ಹಾಗೂ ಪಾರ್ತಿಬನ್ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಎಲ್ಲರೂ ಒಟ್ಟಿಗೆ ಸೇರಿ ದರೋಡೆ ಮಾಡಲು ಸಂಚು ರೂಪಿಸಿದ್ದರು’ ಎಂದೂ ಅಧಿಕಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT