ರೌಡಿಗಳ ಮನೆ ಮೇಲೆ ದಾಳಿ
ಬೆಂಗಳೂರು: ಜೈಲಿಗೆ ಹೋಗಿ ಜಾಮೀನು ಮೇಲೆ ಹೊರಬಂದು ಪುನಃ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ ಎನ್ನಲಾದ ರೌಡಿಗಳ ಮನೆ ಮೇಲೆ ಜೆ.ಬಿ.ನಗರ ಠಾಣೆ ಪೊಲೀಸರು ದಾಳಿ ಮಾಡಿದರು.
‘ಠಾಣೆ ವ್ಯಾಪ್ತಿಯಲ್ಲಿರುವ 35 ರೌಡಿಗಳ ಮನೆಗಳಲ್ಲಿ ಬುಧವಾರ ರಾತ್ರಿಯಿಂದಲೇ ಪರಿಶೀಲನೆ ನಡೆಸಲಾಯತು. ಕೆಲ ರೌಡಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಲಾಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಹೊಸ ವರ್ಷಾಚರಣೆ ವೇಳೆ ಅಪರಾಧ ಕೃತ್ಯ ಎಸಗಲು ರೌಡಿಗಳು, ಸಂಚು ರೂಪಿಸುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಅದೇ ಕಾರಣಕ್ಕೆ ದಾಳಿ ಮಾಡಿ ಪ್ರತಿಯೊಬ್ಬರಿಗೂ ಎಚ್ಚರಿಕೆ ನೀಡಲಾಗಿದೆ. ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ತಾಕೀತು ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.